ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ

  • In State
  • August 18, 2020
  • 39 Views
ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ

ಹುಳಿಯಾರು: ಹೋಬಳಿಯ ದಸೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಯಿತು.

ಪ್ರಭಾರ ಮುಖ್ಯಶಿಕ್ಷಕ ಮಹಾಲಿಂಗಯ್ಯ ಅವರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿ ಮಾತನಾಡಿ ಕೊರೋನಾ ಸೋಂಕು ಎಲ್ಲೆಡೆ ಹೆಚ್ಚುತ್ತಿರುವುದರಿಂದ ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದೆ. ಹಾಗಾಗಿ ಮಕ್ಕಳ ಕಲಿಕೆಗೆ ತೊಡಕಾಗದಿರಲೆಂದು ಸರ್ಕಾರ ಪಠ್ಯ ಪುಸ್ತಕ ವಿತರಿಸುತ್ತಿದೆ. ಪೋಷಕರು ಮನೆಯಲ್ಲಿ ಮಕ್ಕಳಿಗೆ ನಿತ್ಯ ತಪ್ಪದ ಪಠ್ಯ ಬೋದನೆ ಮಾಡಬೇಕಿದೆ ಎಂದು ತಿಳಿಸಿದರು.

ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ರಾದ ಹೋಟಲ್ ನಾಗಣ್ಣ, ಖಜಾಂಚಿ ಮೆಡಿಕಲ್ ರಾಘವೇಂದ್ರ ಮತ್ತು ಶಿಕ್ಷಕರು ಹಾಜರಿದ್ದರು. ಮಕ್ಕಳಿಂದ ಅಂತರವನ್ನು ಕಾಪಾಡಿಕೊಂಡು ಪಠ್ಯಪುಸ್ತಕ ವಿತರಣೆ ಮಾಡಲಾಯಿತು.

ಫ್ರೆಶ್ ನ್ಯೂಸ್

Latest Posts

Featured Videos