“ಮಹಾ ಗದ್ದುಗೆಗೆ” ಠಾಕ್ರೆ

“ಮಹಾ ಗದ್ದುಗೆಗೆ” ಠಾಕ್ರೆ

ಮುಂಬೈ, ನ. 27 : ಬಹುಮತ ಪಡಿಸಲು ಸಂಖ್ಯಾಬಲ ಇಲ್ಲದ ಕಾರಣ ಪ್ರಮಾಣ ವಚನ ಸ್ವೀಕರಿದ ನಾಲ್ಕೇ ದಿನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ. ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು. ಇಂದು ವಿಧಾನಸಭೆಯ ಚುನಾಯಿತ ಸದಸ್ಯರು ವಿಶೇಷ ಅಧಿವೇಶನ ಆರಂಭವಾಗುತ್ತಿದ್ದಂತೆ ಪದಗ್ರಹಣ ಮಾಡಿಕೊಂಡಿದ್ದು ನಂತರ ಬಹುಮತ ಸಾಬೀತಾಗಲಿದೆ. ಮಹಾರಾಷ್ಟ್ರ ವಿಧಾನಸಭೆಯ ಸಂಪ್ರದಾಯದಂತೆ ಮುಖ್ಯಮಂತ್ರಿ ಮೊದಲು ಪ್ರಮಾಣವಚನ ಸ್ವೀಕರಿಸಿ ನಂತರ ಇತರ ಚುನಾಯಿತ ಸದಸ್ಯರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದರು. ನಂತರ ಕೂಡಲೇ ಅಥವಾ ಮರುದಿನದ ಅಧಿವೇಶನದಲ್ಲಿ ಬಹುಮತ ಸಾಬೀತು ಪ್ರಕ್ರಿಯೆ ನಡೆಯುತ್ತಿತ್ತು.

ಆದರೆ ಈ ಬಾರಿ ಚುನಾಯಿತ ಪ್ರತಿನಿಧಿಗಳ ಪ್ರಮಾಣವಚನ ಸ್ವೀಕಾರವಾದ ನಂತರ ನಾಳೆ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಫ್ರೆಶ್ ನ್ಯೂಸ್

Latest Posts

Featured Videos