ಬೆಂಗಳೂರು, ಅ. 20 : ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಮೂವರು ಆರೋಪಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದ ವೇಳೆ ಗುಂಪೊಂದು ಆಗಮಿಸಿ ಆರೋಪಿಗಳ ಬಿಡುಗಡೆ ಒತ್ತಾಯಿಸಿದ್ದರಿಂದ ಕೆಲಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಾಟನ್ಪೇಟೆ ಮತ್ತು ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಉರುಸ್ ನಡೆದಿತ್ತು. ಆ ಸಂದರ್ಭದಲ್ಲಿ ಮೂರು ಮಂದಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದಾರೆ. ಅವರ ಕೈಯ್ಯಲ್ಲಿ ಲಾಂಗ್, ಮಚ್ಚುಗಳಿವೆ ಎಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಸಿಟಿ ಮಾರುಕಟ್ಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು.