ಸಿಎಂ ರಿಂದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ

ಸಿಎಂ ರಿಂದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿ

ಬೆಂಗಳೂರು, ಡಿ. 19: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗಲಿದೆ ಎಂಬ ಭರವಸೆಯನ್ನು ನೀಡಿದ್ದಾರೆ ಎನ್ನಲಾಗಿದೆ.

ಉಪಚುನಾವಣೆಯಲ್ಲಿ ಗೆಲುವಿನ ಬೆನ್ನಲ್ಲೇ ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ಕರಸತ್ತು ಶುರುವಾಗಿತ್ತು. ಆದರೆ, ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಬ್ರೇಕ್ ಹಾಕಿತ್ತು. ಇದೀಗ ಮತ್ತೆ ಸಂಪುಟ ವಿಸ್ತರಣೆಯ ಕಸರತ್ತುಗಳು ಶುರುವಾಗಿದ್ದು, ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು 2 ಅಥವಾ 3 ದಿನಗಳ ನಂತರ ದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos