ರಾಮನ ಪಾಲಾದ ಅಯೋಧ್ಯೆ

ರಾಮನ ಪಾಲಾದ ಅಯೋಧ್ಯೆ

ನವದೆಹಲಿ, ನ. 9 : ಹಿಂದು ಮತ್ತು ಮುಸ್ಲಿಮರ ನಡುವಿನ ಅಯೋಧ್ಯೆ ಕೊನೆಗೂ ಇತ್ಯರ್ಥವಾಗಿದೆ.ಬಹುದಿಗಳಗಳಿಂದ ನೆನೆಗುದ್ದಿಗೆ ಬಿದ್ದಿದ ಅಯೋಧ್ಯೆ ಕೊನೆಗೂ ರಾಮನ ಪಾಲಾಗಿದ್ದು, ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಕೆಲ ಷರತ್ತುಗಳನ್ನು ವಿಧಿಸಿದೆ. ಭೂಮಿಯ ಹಕ್ಕುದಾರಿಕೆ ನೀಡಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂಕೋರ್ಟ್, ಹಿಂದೂಗಳಿಗೆ ಕೆಲ ಷರತ್ತುಗಳನ್ನು ವಿಧಿಸಿ ಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದೆ.
ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿರುವ ನ್ಯಾಯಾಲಯ, ಮುಸ್ಲಿಂ ಸಮುದಾಯಕ್ಕೆ ಬದಲಿ ಜಾಗ ನೀಡಲು ಆದೇಶಿಸಿದೆ. ವಿವಾದಿತ ಅಯೋಧಅಯೆ ಜಾಗವನ್ನು ರಾಮಲಲ್ಲಾಗೆ ನೀಡಿರುವ ನ್ಯಾಯಾಲಯ, ರಾಮಲಲ್ಲಾಗೆ ಮಂದಿರ ನಿರ್ಮಾಣದ ಹಕ್ಕಿಲ್ಲ ಎಂದು ಹೇಳಿದೆ.
ವಿವಾದಿತ ಜಾಗವನ್ನು ಕೇಂದ್ರ ಸರ್ಕಾರಕ್ಕೆ ಒಪ್ಪಿಸಬೇಕು. ಕೇಂದ್ರ ಸರ್ಕಾರ ಮೂರು ತಿಂಗಳ ಒಳಗೆ ಟ್ರಸ್ಟ್ ರಚಿಸಬೇಕು. ಬಳಿಕ ಈ ಪ್ರದೇಶ ಟ್ರಸ್ಟ್’ಗೆ ಹಸ್ತಾಂತರವಾಗಲಿದೆ. ಟ್ರಸ್ಟ್ ಮೇಲುಸ್ತುವಾರಿಯಲ್ಲೇ ಮಂದಿರ ನಿರ್ಮಾಣವಾಗಬೇಕು.

ಫ್ರೆಶ್ ನ್ಯೂಸ್

Latest Posts

Featured Videos