ಕೋಲಾರ: ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸುತ್ತಿರುವುದಾಗಿ, ಮಹಿಳೆಯರು ಸ್ವಾವಲಂಬಿಗಳಾಗಲು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್.ಅರುಣ್ ಪ್ರಸಾದ್ ತಿಳಿಸಿದರು.
ನಗರದ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ವಕ್ಕಲೇರಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ೧೫ ಮಂದಿ ಮಹಿಳಾ ಫಲಾನುಭವಿಗಳಿಗೆ ಜಿಲ್ಲಾ ಉದ್ಯಮ ಕೇಂದ್ರದ ವತಿಯಿಂದ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿ ಅವರು ಮಾತನಾಡಿ, ಮಹಿಳಾ ಫಲಾನುಭವಿಗಳು ಉಚಿತ ಹೊಲಿಗೆ ಯಂತ್ರಗಳನ್ನು ಪಡೆದುಕೊಂಡು ಮನೆಯಲ್ಲಿ ಸುಮ್ಮನೆ ಕೂರದೆ, ಸ್ವಯಂ ಉದ್ಯೋಗಿಗಳಾಗಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು. ಮುಂದಿನ ದಿನಗಳಲ್ಲಿ ವಿವಿಧ ಉದ್ಯೋಗ ತರಬೇತಿ ಹೊಂದಿದ ಫಲಾನುಭವಿಗಳಿಗೆ ಉದ್ಯೋಗ ಸಲಕರಣೆಗಳನ್ನು ಉಚಿತವಾಗಿ ವಿತರಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಅರಹಳ್ಳಿ ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜುನಾಥ್, ಹೊಗರಿ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ಕೈಗಾರಿಕಾ ವಿಸ್ತರಣಾಧಿಕಾರಿ ಗೀತಾ, ಮುಖಂಡರಾದ ಗಾಂಗಾಪುರ ನಾಗರಾಜ್, ವೆಂಕಟರಾಮ್, ಹೂವಳ್ಳಿ ಹನುಮಂತು, ಸೀಪೂರ ಆಂಜಿ, ಶಿವು ಮತ್ತಿತರರಿದ್ದರು.