ಶಾಸಕ ಮುನಿರತ್ನರ ಮೇಲಿನ ಪ್ರಕರಣ ಖುಲಾಸೆ

ಶಾಸಕ ಮುನಿರತ್ನರ ಮೇಲಿನ ಪ್ರಕರಣ ಖುಲಾಸೆ

ಬೆಂಗಳೂರು: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ 2013ರಲ್ಲಿ ಚುನಾವಣಾ ಅಕ್ರಮ ಎಸಗಿ ಅಧಿಕಾರಿ ರವಿಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಖುಲಾಸೆಯಾಗಿದೆ.

2013ರಲ್ಲಿ ಚುನಾವಣೆಯಲ್ಲಿ ಅಕ್ರಮ ಎಸಗಿ ಅಧಿಕಾರಿ ರವಿಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಮುನಿರತ್ನ ಅವರ ಮೇಲೆ ಕೇಳಿ ಬಂದಿತ್ತು.

ಆರೋಪ ಸಾಬೀತು ಪಡಿಸಲು ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆಯಲ್ಲಿ ಪ್ರಕರಣದಿಂದ ಮುನಿರತ್ನ ಅವರು ಖುಲಾಸೆಗೊಂಡಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೇಸ್ ಖುಲಾಸೆಗೊಳಿಸಿ ಆದೇಶ ಪ್ರಕಟಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos