ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಹಣ ಮಂಜೂರು ಮಾಡಬೇಕು

ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಹಣ ಮಂಜೂರು ಮಾಡಬೇಕು

ದೇವನಹಳ್ಳಿ, ಸೆ. 3: ಕೇಂದ್ರ ಸರ್ಕಾರ ಮನಮೋಹನ್ ಸಿಂಗ್ ಆಡಳಿತದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಿದೆ. ಎಂದು ತಾಪಂ ಸದಸ್ಯ ವೆಂಕಟೇಶ್ ಹೇಳಿದರು.

ತಾಲೂಕಿನ ಚನ್ನರಾಯಪಟ್ಟಣ ಗ್ರಾಪಂ ವತಿಯಿಂದ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯ 3 ಲಕ್ಷ ವೆಚ್ಛದ ಚರಂಡಿ ಕಾಮಗಾರಿ ಪರಿಶೀಲಿಸಿ ಸುದ್ಧಿಗಾರರೊಂದಿಗೆ ಮಾತನಾಡಿದರು. ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಹಣ ಮಂಜೂರು ಮಾಡಿದರೆ ಗ್ರಾಮಗಳಲ್ಲಿ ಹೆಚ್ಚು ಅಭಿವೃದ್ಧಿ ಕೆಲಸಗಳು ಆಗುತ್ತವೆ. ಕೇಂದ್ರ ಸರ್ಕಾರ ತಾರತಮ್ಯ ತೋರದೇ ಗ್ರಾಪಂ ವ್ಯಾಪ್ತಿಗೆ ಹಣ ಬರುವಂತೆ ಮಂಜೂರು ಮಾಡಬೇಕು. ಈಗಿರುವ ಕೇಂದ್ರ ಸರ್ಕಾರವು ಈ ಯೋಜನೆ ಜಾರಿ ಮಾಡಿದ್ದು, ರಾಜ್ಯಗಳಿಗೆ ಹಣ ಮಂಜೂರು ಮಾಡಿದರೆ ಗ್ರಾಮಗಳು ಅಭಿವೃದ್ಧಿ ಆಗುತ್ತವೆ. ರೈತರಿಗೂ ಸಹಾ ಹೆಚ್ಚು ಅನುಕೂಲವಾಗುತ್ತದೆ ಎಂದರು.

ಗ್ರಾಪಂ ಅಧ್ಯಕ್ಷೆ ಮಂಜುಳಾ ಮಂಜುನಾಥ್ ಮಾತನಾಡಿ, ರೈತರು ಸಸಿ ನೆಡುವುದು, ಮಣ್ಣಿನ ರಸ್ತೆ ಅಭಿವೃದ್ಧಿ ಇನ್ನೂ ಮುಂತಾದ ಯೋಜನೆಗಳಿಗೆ ಉದ್ಯೋಗ ಖಾತರಿ ಯೋಜನೆ ಸಹಕಾರಿಯಾಗಿದೆ. ಗಣಕ ಯಂತ್ರದಲ್ಲಿ ಕಾಮಗಾರಿಯ ನೋಂದಣಿ ಮಾಡಿ ಕೆಲಸ ಮಾಡಿಸಿದರೆ ಹಣ ಬೇಗ ಮಂಜೂರಾದರೆ ಕೆಲಸ ಮಾಡಿಸುವವರಿಗೂ  ಹಾಗೂ ಕೆಲಸ ಮಾಡುವ ಜನರಿಗೂ ಹಣ ಕೈಸೇರಿದರೆ ಇನ್ನೂ ಹೆಚ್ಚು ಪ್ರಗತಿ ಹೊಂದುತ್ತದೆ. ಇದರಿಂದ ಗ್ರಾಮಗಳು ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ. ಎಂದರು.

ಉದ್ಯೋಗ ಖಾತರಿ ಯೋಜನೆ ಮುಖಾಂತರ ಚರಂಡಿ ಕಾಮಗಾರಿಯನ್ನು ಪ್ರಾರಂಭಿಸಿದ್ದೇವೆ. ಇದರಿಂದ ಗ್ರಾಮದ ಜನರಿಗೂ ಕೆಲಸ ಸಿಗುತ್ತದೆ. ಅಭಿವೃದ್ಧಿ ಕೆಲಸಗಳು ಆಗುತ್ತವೆ. ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ನಾರಾಯಣಸ್ವಾಮಿ, ಕೃಷಿಕ ಸಮಾಜ ನಿರ್ದೇಶಕ ಮಂಜುನಾಥ್, ಗ್ರಾಮದ ಮುಖಂಡ ನಾರಾಯಣಸ್ವಾಮಿ, ಮತ್ತಿತರರು ಇದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos