ಖಾಸಗಿ ಬಸ್ ಗಳ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ ಸಿಎಂ ಸ್ಪಷ್ಟನೆ.

ಖಾಸಗಿ ಬಸ್ ಗಳ ನಷ್ಟ ತುಂಬಿಕೊಡಲು ಸಾಧ್ಯವಿಲ್ಲ ಸಿಎಂ ಸ್ಪಷ್ಟನೆ.

ಸಿಎಂ ಸಿದ್ದರಾಮಯ್ಯ ಬೆಂಗಳೂರು ಬಂದ್ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಪ್ರಮುಖ 5 ಗ್ಯಾರಂಟಿಗಳಲ್ಲಿನ ಒಂದಾದ ಶಕ್ತಿ ಯೋಜನೆ ಇದು ಹೆಣ್ಣು ತಾಯಂದಿರ ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಮಾಡಿರುವಂತಹ ಯೋಜನೆ ಈ ಯೋಜನೆಯನ್ನು ಖಾಸಗಿ ಬಸ್ ಗಳಿಗೂ ವಿಸ್ತರಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ನಡೆಸಲಾಗುತ್ತಿದೆ. ಮಹಿಳೆಯರಿಗೆ ಅನುಕೂಲವಾಗಲಿ ಎಂದು ‘ಶಕ್ತಿ’ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಬಸ್ ಮಾಲೀಕರು ಮತ್ತು ಚಾಲಕರು ನಷ್ಟ ಅನುಭವಿಸಿದ್ದಾರೆ ಎಂದು ಹೇಳುತ್ತಾರೆ.
ಆ ನಷ್ಟವನ್ನು ಸರ್ಕಾರ ತುಂಬಿ ಕೊಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಆಗುವುದಿಲ್ಲ ಈ ಅಸಾಧ್ಯವಾದ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಆದರೆ ಬಂದ್ ಮಾಡಲು ಪ್ರತಿಭಟಿಸಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಆದರೆ ಅಲ್ಲಲ್ಲಿ ಪ್ರತಿಭಟನಾಕಾರರು ರೊಚ್ಚಿಗೆದ್ದು ಬೈಕ್ ಸವಾರರನ್ನು ಮತ್ತು ಆಟೋ ಚಾಲಕರ ಮೇಲೆ ದಾಳಿ ನಡೆಸುತ್ತಿರುವ ದೃಶ್ಯ ಕಂಡು ಬಂದ ಹಿನ್ನೆಲೆಯಲ್ಲಿ ಯಾವುದೇ ತೊಂದರೆಯಾಗದೆ ಶಾಂತಯುತವಾಗಿ. ಪ್ರತಿಭಟನೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವರದಿಗಾರ
ಎ ಚಿದಾನಂದ.

ಫ್ರೆಶ್ ನ್ಯೂಸ್

Latest Posts

Featured Videos