ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುವಂತೆ ಸಿಎಂ ಸೂಚನೆ

ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುವಂತೆ ಸಿಎಂ ಸೂಚನೆ

ತುಮಕೂರು : ಜಿಲ್ಲೆಯಲ್ಲಿ ಎರಡೆನೆಯ ಹಂತದ ಕೊರೋನಾ ವೈರಸ್ ಸೋಂಕು ತಡೆಗಟ್ಟಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಜಿಲ್ಲಾ ಕೋವಿಡ್ ಪ್ರಗತಿಪರಿಶೀಲನಾ ಸಭೆ ನಡೆಸಿದರು.

ತುಮಕೂರಿನ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳೂಂದಿಗೆ ಸಮಾಲೋಚನೆ ನಡೆಸಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.

ಜಿಲ್ಲೆಯ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಪಕ್ಷದ ಹಲವು ಮಾಜಿ ಶಾಸಕರಗಳು ಪಕ್ಷದ ಅಧ್ಯಕ್ಷರು ಸೇರಿದಂತೆ ಹಲವಾರು ಜನರು ಸಭೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ: ಸಿ.ಎನ್.ಅಶ್ವಥನಾರಾಯಣ್, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ, ಸಂಸದರಾದ ಜಿ.ಎಸ್.ಬಸವರಾಜ್, ಎಂ.ನಾರಾಯಣಸ್ವಾಮಿ, ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos