ಪರಿಸರ ಸ್ವಚ್ಛತೆಗೆ ಕಾರ್ಮಿಕರ ಕೊಡುಗೆ ಅಪಾರ

ಪರಿಸರ ಸ್ವಚ್ಛತೆಗೆ ಕಾರ್ಮಿಕರ ಕೊಡುಗೆ ಅಪಾರ

ಔರಾದ:ಪರಿಸರ ಸ್ವಚ್ಛತೆಯ ಜೊತೆಗೆ ಜನರ ಮನೋಭಾವವನ್ನು ಬದಲಾಯಿಸುವುದು ಸ್ವಚ್ಛ ಭಾರತದ ಪರಿಕಲ್ಪನೆಯಾಗಿದ್ದು, ಸ್ವಚ್ಛತೆಯ ಕುರಿತು ಕಾನೂನು ಜಾರಿಗೆ ಬಂದರೆ ಸಾಲದು, ಜನರ ಮನಸ್ಥಿತಿ ಪರಿವರ್ತನೆ ಆಗಬೇಕು, ಪರಿಸರವನ್ನು ಸ್ವಚ್ಛವಾಗಿರಿಸುವಲ್ಲಿ ಕಾರ್ಮಿಕರ ಕೊಡುಗೆ ಅಪಾರವಾದುದು ಎಂದು ಪಟ್ಟಣ ಪಂಚಾಯತ ಅಧ್ಯಕ್ಷರು ಅಂಬಿಕಾ ಕೆರಬಾ ಪವಾರ ಹೇಳಿದರು.

ಔರಾದ ಪಟ್ಟಣ ಪಂಚಾಯತ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಮಿಕ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಎಲ್ಲಾ ಪೌರಕಾರ್ಮಿಕರಿಗೆ ಸನ್ಮಾನಿಸಿ ಅಧ್ಯಕ್ಷರು ಸ್ವಂತ ಖರ್ಚಿನಲ್ಲಿ ಮಹಿಳಾ ಕಾರ್ಮಿಕರಿಗೆ ಸೀರೆ ಉಡುಗೋರೆಯಾಗಿ ನೀಡಿದರು.
ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಚತೆಯ ಕುರಿತು ಬಿಡುವಿಲ್ಲದೆ ನಿರಂತರ ಸೇವೆ ಸಲ್ಲಿಸುವ ಪೌರ ಕಾರ್ಮಿಕರ ಸೇವೆ ಹಾಗೂ ಅವರ ಪ್ರಾಮುಖ್ಯತೆಯನ್ನು ಎತ್ತಿಹಿಡಿಯುವ ಸಲುವಾಗಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸಂತೋಷ ಪೋಕಲವಾರ, ಮತ್ತು ಎಲ್ಲಾ ಸದಸ್ಯರು, ಮುಖ್ಯಾಧಿಕಾರಿಗಳು ಸುರವಿಕುಮಾರ, ಸಿಬ್ಬಂದಿ ವರ್ಗ, ಮತ್ತು ಪೌರಕಾರ್ಮಿಕರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos