ಆಯ್ಕೆ ಮಾಡುವ ತೀರ್ಮಾನ ಹೈಕಮಾಂಡ್‌

ಆಯ್ಕೆ ಮಾಡುವ ತೀರ್ಮಾನ ಹೈಕಮಾಂಡ್‌

ಬೆಂಗಳೂರು, ಜ. 07: ರಾಜ್ಯಸಭೆಗೆ ನನ್ನನ್ನು ಆಯ್ಕೆ ಮಾಡುವ ತೀರ್ಮಾನ ಹೈಕಮಾಂಡ್ ಗೆ ಬಿಟ್ಟದ್ದು. ಹೈಕಮಾಂಡ್ ಏನೇ ತೀರ್ಮಾನ ತೆಗೆದು ಕೊಂಡರೂ, ಅದಕ್ಕೆ ನಾನು ಬದ್ದ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಹೈಕಮಾಂಡ್ ರಾಜ್ಯಸಭೆ ಸದಸ್ಯನನ್ನಾಗಿ ಮಾಡಿದರೆ ಒಪ್ಪುವ ಇಂಗಿತವನ್ನು ಪರೋಕ್ಷವಾಗಿ ಮಲ್ಲಿಕಾರ್ಜುನ ಖರ್ಗೆ ವ್ಯಕ್ತಪಡಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ಆ ಬಗ್ಗೆ ನನ್ನ ಅಭಿಪ್ರಾಯ ಕೇಳಿದ್ರೆ ಆಗ ಹೇಳ್ತೇನೆ ಎಂದರು.

ಸಿಎಎ ಹಾಗೂ ಎನ್ ಸಿ ಆರ್ ವಿಚಾರದಲ್ಲಿ ಕೇಂದ್ರ ಗೊಂದಲ ಸೃಷ್ಟಿ ಮಾಡುತ್ತಿದೆ. ಜೆಎನ್ ಯು ಕಾಲೇಜಿನಲ್ಲಿ ಎಬಿವಿಪಿ ಕಾರ್ಯಕರ್ತರು ಟೆರರಿಸಂ ಮಾಡಿದ್ದಾರೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ದೆಹಲಿ ಪೊಲೀಸರ ಬೆಂಬಲ ಇದೆ ಎಂದು ಭಾವಿಸಬೇಕಾಗುತ್ತೆಬ ಎಂದು ಖರ್ಗೆ ಕಿಡಿಕಾರಿದರು.

ವಿನಾಕಾರಣ ಗೊಂದಲ ಸೃಷ್ಟಿ ಮಾಡೋ ಕೆಲಸವನ್ನ ಮೋದಿ ಮಾಡುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಬಗ್ಗೆ ಇದ್ದ ಭಾವನೆ ಬದಲಾಗುತ್ತಿದೆ ಎಂದು ಮಾಜಿ ಸಂಸದ ಖರ್ಗೆ ಅಸಮಧಾನ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos