ವಾಷಿಂಗ್ಟನ್ , ಅ. 29 : 48 ವರ್ಷದ ಅಬು ಬಕರ್ ಅಲ್ ಬಾಗ್ದಾದಿ ಉಗ್ರ ಸಂಘಟನೆಯನ್ನು ಕಟ್ಟಿಕೊಂಡಿದ. ಹಿಂಸಾತ್ಮಕ ಭಯೋತ್ಪಾದನೆಯನ್ನು ಆರಂಭಿಸಿ 2014 ರಲ್ಲಿ ಸಿರಿಯಾ ಮತ್ತು ಇರಾಕ್ನಲ್ಲಿ ಒಂದು ಪ್ರದೇಶವನ್ನು ಆಕ್ರಮಣ ಮಾಡಿಕೊಂಡು ಸಾವಿರಾರು ಜನರ ಸಾವಿಗೆ ಕಾರಣನಾಗಿದ್ದ.
ಐಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ. ಇರಾ ಕ್ ನಿ ವಾಸಿ ಬಾಗ್ದಾದಿಯನ್ನು ಹಿಡಿಯಲು ಸಹಾಯ ಮಾಡಿದ ಅಮೆರಿಕ ಸೇನಾ ಶ್ವಾನದ ಫೋಟೋವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಕಾರ್ಯಾಚರಣೆ ವೇಳೆ ಅಮೆರಿಕದ ಸೇನೆಗೆ ಸಹಾಯ ಮಾಡಿದ ಶ್ವಾನದ ಫೋಟೋವನ್ನು ಟ್ರಂಪ್ ಅವರು ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ಐಸಿಸ್ನ ನಾಯಕ ಅಬು ಬಕರ್ ಅಲ್ ಬಾಗ್ದಾದಿಯನ್ನು ಸೆರೆಹಿಡಿದು ಕೊಲ್ಲುವಲ್ಲಿ ಮಹತ್ತರವಾದ ಕೆಲಸ ಮಾಡಿದ ಅದ್ಭುತ ಶ್ವಾನದ ಚಿತ್ರವನ್ನು ನಾವು ನಿಮಗೆ ನೀಡುತ್ತಿದ್ದೇವೆ ಎಂದು ಟ್ರಂಪ್ ಬರೆದುಕೊಂಡಿದ್ದಾರೆ.
ತನ್ನ ಮೂವರು ಮಕ್ಕಳೊಂದಿಗೆ ಆತ್ಮಾಹುತಿ ಬಾಂಬ್ ಸಿಡಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದರು.