ಜಮೀನಿನಲ್ಲಿ ಪ್ರತ್ಯಕ್ಷನಾದ ದೇವರು!

ಜಮೀನಿನಲ್ಲಿ ಪ್ರತ್ಯಕ್ಷನಾದ ದೇವರು!

ಚಿತ್ರದುರ್ಗ, ನ. 26 : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೂವಿನಹೊಳೆ ಗ್ರಾಮದ ಜಮೀನೊಂದರಲ್ಲಿ ಪುರಾತನ ವಿಗ್ರಹಗಳು ಪತ್ತೆಯಾಗಿವೆ. ಕಲ್ಲುಗಳೂ ದೊರೆತಿದ್ದು, ಇದೀಗ ಸ್ಥಳದ ಇತಿಹಾಸವನ್ನು ಹುಡುಕುವ ಪ್ರಯತ್ನ ಸಾಗಿದೆ. ಎಂಟು ನೂರು ವರ್ಷಗಳ ಹಿಂದಿನದ್ದು ಎಂದು ಅಂದಾಜಿಸಲಾಗಿದ್ದು, ವಿಗ್ರಹ ದೊರೆತ ಕ್ಷಣದಿಂದಲೂ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ತಂಡೋಪತಂಡವಾಗಿ ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಈಗಾಗಲೇ ವಿಗ್ರಹ ದೊರೆತ ಜಾಗದಲ್ಲಿ ದೇವಸ್ಥಾನ ನಿರ್ಮಿಸಬೇಕೆಂದು ಚಪ್ಪರ ಕೂಡ ಹಾಕಿದ್ದಾರೆ ಗ್ರಾಮಸ್ಥರು.
ಎಲ್ಲಿ ದೊರೆತಿತ್ತು ವಿಗ್ರಹ..?
ಮೂರ್ನಾಲ್ಕು ದಿನಗಳ ಹಿಂದೆ ಜಮೀನಿನಲ್ಲಿ ಜೆಸಿಬಿಯಿಂದ ಮಣ್ಣು ಹಸನುಗೊಳಿಸುವಾಗ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೂವಿನಹೊಳೆ ಗ್ರಾಮದ ಗಿರಿಸ್ವಾಮಿ ಮತ್ತು ವೆಂಕಟರಮಣಪ್ಪ ಅವರ ಜಮೀನಿನ ಮಧ್ಯದಲ್ಲಿ ಕೆಲವು ವಿಗ್ರಹಗಳು ದೊರೆತಿದ್ದವು. ಶಂಕು, ಚಕ್ರ, ಗದೆ, ಕೀರಿಟ, ಜನಿವಾರ ಸಹಿತವಿದ್ದ 4 ಅಡಿ ಮೂರ್ತಿ ದೊರೆತಿದ್ದು ಗ್ರಾಮಸ್ಥರಲ್ಲಿ ಅಚ್ಚರಿ ತಂದಿತ್ತು. ಈ ವಿಗ್ರಹದ ಜೊತೆಗೆ ಎರಡು ಸಣ್ಣ ಲಿಂಗಗಳು, ನಂದಿ ವಿಗ್ರಹ, ಶಿವನ ಪೀಠ ದೊರೆತಿದ್ದವು. ದೇವರ ಶಿಲೆ ಸಿಕ್ಕ ಸ್ಥಳದಲ್ಲೇ ಹಳೆಯ ಕಲ್ಲುಗಳು, ಇಟ್ಟಿಗೆಗಳೂ ದೊರತಿವೆ. ಚಿತ್ರದುರ್ಗದಲ್ಲಿ ರೈತನ ಜಮೀನಿನಲ್ಲಿ ಪ್ರ

ಫ್ರೆಶ್ ನ್ಯೂಸ್

Latest Posts

Featured Videos