ಮಡಿಕೇರಿ, ಅ. 15: ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೊಬ್ಬರ ಮಡಿಕೇರಿ ನಗರದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ನಗರದ ಮುತ್ತಪ್ಪ ದೇವಾಲಯ ಬಳಿ ನಿವಾಸಿ ಪ್ರದೀಪ ಮೃತ ದುರ್ದೈವಿ. ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ.