ಉಡುಪಿ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ

ಉಡುಪಿ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ

ಉಡುಪಿ, ಡಿ, 20: ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಅವರ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ಕಸ್ತೂರ ಬಾ ಮಣಿಪಾಲ ಆಸ್ಪತ್ರೆ ವೈದ್ಯರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಮುಂಜಾನೆ 5 ಘಂಟೆ ಸುಮಾರಿಗೆ ಪೇಜಾವರ ಶ್ರೀ ಅವರನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕರೆದುಕೊಂಡುಬರಲಾಗಿದೆ. ಅವರ ದೇಹಾರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ವೆಂಟಿಲೇಟರ್ ಮೂಲಕ‌ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ.

ಅವರಿಗೆ ನ್ಯುಮೋನಿಯಾಗೆ ಚಿಕಿತ್ಸೆ ನೀಡುತ್ತಾ, ಪ್ರತಿರೋಧಕ ಔಷಧಿ ಮತ್ತು ಸಹಾಯಕ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಗಳ ಬಗ್ಗೆ ಸೂಚನೆ ನೀಡಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos