ದಶದಿಕ್ಕುಗಳಲ್ಲಿ ಅರಳಿದ ಕಮಲ

ದಶದಿಕ್ಕುಗಳಲ್ಲಿ ಅರಳಿದ ಕಮಲ

ಬೆಂಗಳೂರು, ಡಿ. 09 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದೇ ಹೇಳಲಾಗುತ್ತಿದ್ದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಹಿರೇಕೂರಿನಲ್ಲಿ ಬಿಸಿ ಪಾಟೀಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ.ಬನ್ನಿಕೋಡ್ ವಿರುದ್ಧ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಹಾಗೂ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿ.ವೈ.ಘೋರ್ಪಡೆ ಹಾಗೂ ಜೆಡಿಎಸ್ ಅಭ್ಯರ್ಥಿ ಎನ್.ಎಂ.ನಬಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಅಂಜನಪ್ಪ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು ಅವರು, ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧರಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos