ತಲೆ ಎತ್ತಲಿದೆ ಭವ್ಯ ವಿಗ್ರಹ

ತಲೆ ಎತ್ತಲಿದೆ ಭವ್ಯ ವಿಗ್ರಹ

ಹಂಪಿ: ಕರ್ನಾಟಕದಲ್ಲಿ ಹಂಪಿಯಲ್ಲಿ ವಿಶ್ವದ ಅತಿ ಎತ್ತರದ ಹನುಮಂತನ ವಿಗ್ರಹವನ್ನು ಪ್ರತಿಷ್ಠಾಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರಾಮಭಕ್ತ ಹನುಮಂತನ ಭವ್ಯ ವಿಗ್ರಹ ಹಂಪಿಯಲ್ಲಿ ತಲೆ ಎತ್ತಲಿದೆ.

ಹಂಪಿ ಮೂಲದ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್, 215 ಮೀಟರ್ ಎತ್ತರದ ಹನುಮಂತನ ಮೂರ್ತಿಯನ್ನು ನಿರ್ಮಿಸಲು ಮುಂದಾಗಿದೆ.

ಹನುಮಂತನ ಜನ್ಮಸ್ಥಳವಾದ ಕಿಷ್ಕಿಂಧಾದಲ್ಲಿ ಒಟ್ಟು 1,200 ಕೋಟಿ ರೂ. ವೆಚ್ಚದಲ್ಲಿ ರಾಮಭಕ್ತ ಹನುಮಂತನ ವಿಗ್ರಹ ನಿರ್ಮಿಸಲು ಯೋಜನೆ ಸಿದ್ಧವಾಗಿದ್ದು, ಮುಂದಿನ ಆರು ವರ್ಷಗಳಲ್ಲಿ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ.

ರಾಮಭಕ್ತ ಹನುಮಂತನ ಶ್ರೀಮಂತ ಪರಂಪರೆಯನ್ನು ಭವಿಷ್ಯದ ಪೀಳಿಗೆಗೆ ತಿಳಿಯುವಂತೆ ಮಾಡುವುದು ಟ್ರಸ್ಟ್ನ ಉದ್ದೇಶವಾಗಿದ್ದು, 215 ಮೀಟರ್ ಎತ್ತರದ ಹನುಮಾನ್ ಮೂರ್ತಿ ಈ ಶ್ರೀಮಂತ ಪರಂಪರೆಯನ್ನು ಪ್ರತಿಬಿಂಬಿಸುವ ಸ್ಥಳವಾಗಿ ಹೊರಹೊಮ್ಮಲಿದೆ ಎಂದು ಗೋವಿಂದನಂದ ಸರಸ್ವತಿ ಸ್ವಾಮಿ ಭರವಸೆ ವ್ಯಕ್ತಪಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos