ಇಂದು ಮತ್ತು ನಾಳೆ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು

ಇಂದು ಮತ್ತು ನಾಳೆ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು

ಯಾದಗಿರಿ: ಯಾದಗಿರಿ ಜಿಲ್ಲೆಯಾದ್ಯಂತ ಇಂದು (ಅ.01) ಮತ್ತು ನಾಳೆ (ಅ.02) ಜಿಲ್ಲಾ ಪ್ರವಾಸವನ್ನು ಕೈಗೊಂಡಿರುವ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಇಂದು ಅ. 1 ಹಾಗೂ 2 ರಂದು ಜಿಲ್ಲಾ ಪ್ರವಾಸ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ.ಬಿದರಕುಂದಿ ಅವರು ತಿಳಿಸಿದ್ದಾರೆ.

2024ರ ಅಕ್ಟೋಬರ್ 1ರ ಮಂಗಳವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಮಧ್ಯಾಹ್ನ 10.30 ಗಂಟೆಗೆ ಆಗಮಿಸಿ ಶಹಾಪೂರ ನಗರದ ಕನ್ನಡ ಸಾಹಿತ್ಯ ಪರಿಷತ್ತು ಆವರಣ, ದೇಶಮುಖ ಬಡಾವಣೆದಲ್ಲಿ ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ತು ಶಹಾಪೂರ ಇವರು ಆಯೋಜಿಸಿರುವ ಅಭಿನಂದನಾ ಸಮಾರಂಭ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಗುರುಭವನ ನಿರ್ಮಾಣಕ್ಕೆ ಅಗತ್ಯ ಕ್ರಮ: ಡಿಕೆಶಿ

ನಂತರ ಮಧ್ಯಾಹ್ನ 12 ಗಂಟೆಗೆ ಶಹಾಪೂರ ನಗರದಲ್ಲಿ ಸಾರ್ವಜನಿಕರ ಕುಂದುಕೊರತೆ ವಿಚಾರಣೆ ಆಲಿಸುವರು ತದನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

ಇನ್ನು 2024ರ ಅಕ್ಟೋಬರ್ 2ರ ಬುಧವಾರ ರಂದು  ಬೆಳಿಗ್ಗೆ 9.30 ಗಂಟೆಗೆ ಯಾದಗಿರಿ ನಗರದಲ್ಲಿ  ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ತದನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

 

ಫ್ರೆಶ್ ನ್ಯೂಸ್

Latest Posts

Featured Videos