ಆರೋಗ್ಯ ಸಚಿವರೇ ಸಾರ್ವಜನಿಕ ಸ್ಥಳದಲ್ಲಿ ನಿಯಮ ಉಲ್ಲಂಘನೆ

ಆರೋಗ್ಯ ಸಚಿವರೇ ಸಾರ್ವಜನಿಕ ಸ್ಥಳದಲ್ಲಿ ನಿಯಮ ಉಲ್ಲಂಘನೆ

ರಾಯಚೂರು, ಏ. 05:  ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಇತತರಿಗೆ ಮಾದರಿಯಾಗಬೇಕಿದ್ದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ವತ: ತಾವೇ ಮಾಸ್ಕ್ ಧರಿಸದೆ ಜನರಿಗೆ ಮಾಸ್ಕ್ ವಿತರಿಸುವ ಮೂಲಕ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಜಿಲ್ಲೆಯ ಸಿಂಧನೂರಿನ ಬಿಜೆಪಿ ಕಚೇರಿಯಲ್ಲಿ ಜನರಿಗೆ ಸ್ಯಾನಿಟೈಸರ್ ಹಾಗೂ ಮಾಸ್ಕ್ಗಳನ್ನು ವಿತರಣೆ ಮಾಡುವಾಗ ಆರೋಗ್ಯ ಸಚಿವರು ತಾವೆ ಮಾಸ್ಕ್ ಧರಿಸಿರಲಿಲ್ಲ. ಸಚಿವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವಿತರಿಸಿದ್ದಾರೆ. ಮಾಸ್ಕ್ ಧರಿಸಿ ಮಾದರಿಡಯಾಗಬೇಕಿದ್ದ ಆರೋಗ್ಯ ಸಚಿವರು ಸಾರ್ವಜನಿಕ ಸ್ಥಳದಲ್ಲಿ ನಿಯಮ ಉಲ್ಲಂಘನೆ ಮಾಡಿದ್ದು ಚರ್ಚ್ಚೆಗೆ ಕಾರಣವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos