ಬೆಂಗಳೂರು : ಹಾಗೇ ಇನ್ನೆರಡು ತಿಂಗಳುಗಳಲ್ಲಿ ಕೈಗೊಳ್ಳಬೇಕಾದ ಕ್ರಮ, ಲಾಕ್ ಡೌನ್, ಅಂತರ್ ಜಿಲ್ಲಾ ಸಂಚಾರ ತಡೆ, ಹಲವು ಕಠಿಣ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಅಲ್ಲದೇ ಎಸ್.ಎಸ್.ಎಲ್.ಸಿ. ಪರೀಕ್ಷೆ ಬಳಿಕ ಲಾಕ್ ಡೌನ್ ಮಾಡುವ ಬಗ್ಗೆ ಕೂಡ ಇಂದಿನ ಸಭೆಯಲ್ಲಿ ನಿರ್ಧಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಮಧ್ಯಾಹ್ನ 2ಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಜ್ಞ ವೈದ್ಯರು, ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ನಡೆಯಲಿರುವ ಈ ತುರ್ತು ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.