ನ.10 ರಂದು ಎಣ್ಣೆ ಸಿಗೋಲ್ಲ

ನ.10 ರಂದು ಎಣ್ಣೆ ಸಿಗೋಲ್ಲ

ಬೆಂಗಳೂರು, ನ. 06: ಬೆಂಗಳೂರಿನಾದ್ಯಂತ ಇದೇ ನ. 10 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಅವರು ಆದೇಶ ಹೊರಡಿಸಿದ್ದು, ನವೆಂಬರ್ 10 ರಂದು ಮುಸ್ಲಿಂರ ಹಬ್ಬ ಈದ್ ಮಿಲಾದ್ ಇರುವ ಕಾರಣ ಅಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರಗೂ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos