ಬೆಂಗಳೂರು, ಡಿ. 29 : ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.
ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತಿಮ ಕ್ರಿಯಾ ವಿಧಿವಿಧಾನ ನಡೆಯಬೇಕು ಎಂದು ಪೇಜಾವರ ಶ್ರೀಗಳು ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರು. ಲಿಖಿತ ರೂಪದಲ್ಲಿ ಬರೆದು ಆಗಾಗ ಕಿರಿಯ ಶ್ರೀಗಳಿಗೆ ಅದನ್ನು ತೋರಿಸುತ್ತಿದ್ದರು. ಜಾಗವನ್ನು ಕೂಡ ಸೂಚಿಸಿ, ಇಲ್ಲೇ ನನ್ನ ಬೃಂದಾವನ ಆಗಬೇಕು ಎಂದು ಶ್ರೀಗಳು ಬರೆದು ಕೊಟ್ಟಿದ್ದರು. ಕಳೆದ ಬಾರಿ ಹರ್ನಿಯಾ ಅಪರೇಷನ್ಗೆ ಒಳಗಾಗಿದ್ದ ಶ್ರೀಗಳು ತಮ್ಮ ಕೊನೆಯಾಸೆಯ ಬಗ್ಗೆ ತಿಳಿಸಿದ್ದರು ಎಂದು ಪಬ್ಲಿಕ್ ಟಿವಿಗೆ ರಘುಪತಿ ಭಟ್ ತಿಳಿಸಿದ್ದಾರೆ. ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ. ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣನ ಪಾದ ಸೇರಿದ್ದಾರೆ.