ಮಹಾಮಾರಿ ಮಳೆಗೆ ಜನರ ತತ್ತರ

ಮಹಾಮಾರಿ ಮಳೆಗೆ ಜನರ ತತ್ತರ

ಗದಗ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಜನರು ಮುನ್ನೆಚ್ಚರಿಕೆ ವಹಿಸಬೇಕು. ಮಳೆಯಿಂದ ಸಂಕಷ್ಟಕ್ಕೆ ಸಿಲುಕುವ ಜನರಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಕ್ಷಣವೇ ನೆರವು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ತಿಳಿಸಿದ್ದಾರೆ.
ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ನೇಮಿಸಲಾಗಿರುವ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ, ಕಂದಾಯ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು, ಅಗತ್ಯ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.
ಪ್ರವಾಹ ಸಂರ‍್ಭದಲ್ಲಿ ಸಾರಿಗೆ ಸಂಚಾರಕ್ಕಾಗಿ ಸುರಕ್ಷಿತ ಮರ‍್ಗ ತೆರೆಯಬೇಕು. ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯ್ತಿಯವರು ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ವಿದ್ಯುತ್ ತಂತಿಗಳು, ಟ್ರಾನ್ಸ್ಫರ‍್ಮರ‍್ಗಳು ಬಿದ್ದು ವಿದ್ಯುತ್ ಹರಿದು ಸರ‍್ವಜನಿಕರಿಗೆ ತೊಂದರೆ ಆಗದಂತೆ ಅವಶ್ಯಕ ಕ್ರಮಗಳನ್ನು ಶೀಘ್ರವೇ ಜರುಗಿಸಬೇಕು ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos