ಅಡುಗೆ ಅನಿಲ ಬೆಲೆ ಏರಿಕೆ

ಅಡುಗೆ ಅನಿಲ ಬೆಲೆ ಏರಿಕೆ

ಮಾ.1, ನ್ಯೂಸ್ ಎಕ್ಸ್ ಪ್ರೆಸ್, ನವದೆಹಲಿ: 3 ತಿಂಗಳುಗಳ ಕಾಲ ಇಳಿಕೆ ಕಂಡಿದ್ದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಇಂದು ದರ ಏರಿಕೆ ಮಾಡಲಾಗಿದೆ.

ಸಬ್ಸಿಡಿ ಇರುವ ಎಲ್ಪಿಜಿ ಸಿಲಿಂಡರ್ನ ಬೆಲೆ 2.08 ರೂ. ಏರಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರ್ನ  ಬೆಲೆ 42.50 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ ಸಬ್ಸಿಡಿಯುಳ್ಳ ಅಡುಗೆ ಅನಿಲ ಪ್ರತಿ ಸಿಲಿಂಡರ್ ಗೆ 495.61 ರೂ ಆಗಲಿದೆ ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 701.50 ರೂ ಆಗಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಹೇಳಿದೆ.

ಜೂನ್ ತಿಂಗಳಿನಿಂದ ಡಿಸೆಂಬರ್ವರೆಗೂ ಸತತವಾ 6 ಬಾರಿ ದರ ಏರಿಕೆಯಾಗಿದೆ. ಇದರಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಈಗ ಬೆಲೆ ಇಳಿಕೆಯಿಂದ ತುಸು ನೆಮ್ಮದಿ ದೊರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್ ಪಿಜಿ ದರ ಕುಸಿತದಿಂದ ಅಮೆರಿಕನ್ ಡಾಲರ್ ಎದುರು ರೂಪಾಯಿ ವಿನಿಮಯ ದರ ಬಲಗೊಂಡ ಕಾರಣ ಎಲ್ ಪಿಜಿ ದರ ಇಳಿಕೆಯಾಗಿತ್ತು. ಆದರೆ, ಇಂಧನ ಮಾರುಕಟ್ಟೆ ತೆರಿಗೆ ದರ ಹೆಚ್ಚಳವಾಗಿರುವ ಕಾರಣ ಅಡುಗೆ ಅನಿಲ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ತಿಳಿದು ಬಂದಿದೆ

ವರ್ಷಕ್ಕೆ 14.2 ಕೆಜಿ ತೂಕದ 12 ಸಿಲಿಂಡರ್ಗಳಿಗೆ ಸರ್ಕಾರ ಸಬ್ಸಿಡಿ ಒದಗಿಸುತ್ತಿದ್ದು, ಅದು ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ.

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.

 

ಫ್ರೆಶ್ ನ್ಯೂಸ್

Latest Posts

Featured Videos