ಸಿರಧಾನ್ಯ ಬಿಸಿಯೂಟ ನೀಡಲು ರಾಜ್ಯ ಸರ್ಕಾರ ಚಿಂತನೆ

ಸಿರಧಾನ್ಯ ಬಿಸಿಯೂಟ ನೀಡಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು, ಮಾ. 02: ಹಲವು ವರ್ಷಗಳಿಂದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದು, ಬಿಸಿ ಊಟದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಬೇಕೆಂದು ಒಂದು ಹೊಸ ಯೋಜನೆಯನ್ನು ತೆಗೆದುಕೊಂಡಿದೆ ಎನ್ನಲಾಗಿದೆ

ಹೌದು, ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಸಿರಧಾನ್ಯ ಬಿಸಿಯೂಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಮದ್ಯಾಹ್ನದ ಬಿಸಿಯೂಟದಲ್ಲಿ ಮಕ್ಕಳಿಗೆ ಶಕ್ತಿಯುತ ಆಹಾರ ನೀಡುವ ಉದ್ದೇಶದಿಂದ ಸಿರಿಧಾನ್ಯ ಬಳಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಶೀಘ್ರದಲ್ಲೇ ರಾಜ್ಯದ ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗಲಿದೆ.

ಮಧ್ಯಾಹ್ನದ ಬಿಸಿಯೂಟದಲ್ಲಿ ಕಬ್ಬಿಣಾಂಶ, ಪ್ರೋಟಿನ್, ಕ್ಯಾಲ್ಸಿಯಂ ಇರುವ ರಾಗಿ, ನವಣೆ, ಜೋಳ, ಸಜ್ಜೆ ಸೇರಿದಂತೆ ಹಲವು ಧಾನ್ಯಗಳನ್ನು ಬಿಸಿಯೂಟದಲ್ಲಿ ಬಳಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

 

ಫ್ರೆಶ್ ನ್ಯೂಸ್

Latest Posts

Featured Videos