ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್..!?

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್..!?

ನವದೆಹಲಿ, ಡಿ. 14 : ಮಸೂದೆ ವಿರೋಧಿಸಿ ಸಂಸತ್ ಭವನಕ್ಕೆ ಪ್ರತಿಭಟನಾ ಮೆರವಣಿಗೆ ಹೊರಟ್ಟಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.
50 ಪ್ರತಿಭಟನಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿವಿ ಕ್ಯಾಂಪಸ್ನಿಂದ ವಿದ್ಯಾರ್ಥಿಗಳು ಮೆರವಣಿಗೆ ಆರಂಭ ಮಾಡುತ್ತಿದ್ದಂತೆ ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಯೋಗಿಸಿ ಗುಂಪು ಚದುರಿಸಿದ್ದಾರೆ. ಇತ್ತ, ಪಶ್ಚಿಮಬಂಗಾಳದ ಮುರ್ಷಿದಾಬಾದ್ ಜಿಲ್ಲೆಯೊಂದರ ರೈಲ್ವೆ ಸ್ಟೇಷನ್ಗೇ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.
ತಡೆಯಲು ಯತ್ನಿಸಿದ ರೈಲ್ವೆ ಪೊಲೀಸರಿಗೂ ಥಳಿಸಿದ್ದಾರೆ. ಇದರಿಂದ ಬಾಂಗ್ಲಾದೇಶ ಗಡಿಯಲ್ಲಿರುವ ಮುರ್ಷಿದಾಬಾದ್ ಜಿಲ್ಲೆಯಲ್ಲಿ ರೈಲು ಸಂಚಾರ ವ್ಯತ್ಯವಾಗಿದೆ. ಇಷ್ಟೆ ಅಲ್ಲದೆ, ಹೌರಾ ಜಿಲ್ಲೆಯ ಉಲುಬೇರಿಯಾ ರೈಲು ನಿಲ್ದಾಣಕ್ಕೂ ಬೆಂಕಿ ಹಚ್ಚಿಹಚ್ಚಿದ್ದಾರೆ. ರೈಲುಗಳ ಮೇಲೆ ಕಲ್ಲು ತೂರಾಟ ಮಾಡಿದ್ದರಿಂದ ಚಾಲಕರು ಗಾಯಗೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos