ಶಬರಿಮಲೆ ಪ್ರವೇಶಿಸಿದ್ದ ಮಹಿಳೆಯರಿಗೆ ಸಂಪೂರ್ಣ ಭದ್ರತೆ ನೀಡಲು ಸುಪ್ರೀಂ ಸೂಚನೆ

ಶಬರಿಮಲೆ ಪ್ರವೇಶಿಸಿದ್ದ ಮಹಿಳೆಯರಿಗೆ ಸಂಪೂರ್ಣ ಭದ್ರತೆ ನೀಡಲು ಸುಪ್ರೀಂ ಸೂಚನೆ

ನವದೆಹಲಿ: ಶಬರಿಮಲೆ ದರ್ಶನ ಪಡೆದು ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಇಬ್ಬರು ಮಹಿಳೆಯರಿಗೆ 24 ತಾಸು ರಕ್ಷಣೆ ನೀಡುವಂತೆ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ. ಕನಕದುರ್ಗ ಮತ್ತು ಬಿಂದು ತಮಗೆ 24×7 ರಕ್ಷಣೆ ನೀಡಬೇಕೆಂದು ಕನಕದುರ್ಗಾ ಹಾಗೂ ಬಿಂದು ಸುಪ್ರೀಂಕೋರ್ಟ್‍ಗೆ ಮನವಿ ಸಲ್ಲಿಸಿದ್ದರು.

ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಹಾಗೂ ನ್ಯಾಯಮೂರ್ತಿಗಳಾದ ಎಲ್.ಎನ್.ರಾವ್ ಮತ್ತು ಎಸ್.ಕೆ.ಕೌಲ್ ಅವರನ್ನೊಳಗೊಂಡ ಪೀಠ ಕನಕದುರ್ಗಾ ಮತ್ತು ಬಿಂದು ಅವರಿಗೆ 24 ತಾಸುಗಳ ಭದ್ರತೆ ಒದಗಿಸುವುದು ಕೇರಳ ಸರ್ಕಾರದ ಜವಾಬ್ದಾರಿ ಎಂದು ಹೇಳಿದೆ.

ಇದನ್ನು ಕಟ್ಟುನಿಟ್ಟಾಗಿ ಪಾಲಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಬೇಕೆಂದು ತಿಳಿಸಿದೆ. ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ಭೇಟಿ ನೀಡಿ ಹಿಂದಿರುಗಿದ್ದ ಕನಕದುರ್ಗಾ ಅವರಿಗೆ ಅವರ ಅತ್ತೆ ಹಲ್ಲೆ ಮಾಡಿದ ನಂತರ ತಮಗೆ ಭದ್ರತೆ ನೀಡಬೇಕೆಂದು ಕೋರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos