ಕಣ‍್ಣಿರು ತರಿಸುವ ಈರುಳ್ಳಿ ದ್ವಿ ಶತಕದತ್ತ

ಕಣ‍್ಣಿರು ತರಿಸುವ ಈರುಳ್ಳಿ ದ್ವಿ ಶತಕದತ್ತ

ಬೆಳಗಾವಿ, ಡಿ. 05: ಕಳೆದ ವಾರದಿಂದ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ಬೆಲೆ ಗ್ರಾಹಕರನ್ನು ಕಂಗಾಲಾಗಿಸಿದೆ.  ಕಳೆದ ಕೆಲ ದಿನಗಳಿಂದ ಖರೀದಿದಾರರ ಕಣ್ಣಲ್ಲಿ ನೀರು ತರಿಸುತ್ತಿರುವ ಈರುಳ್ಳಿ ಬೆಲೆ ಸದ್ಯಕ್ಕೆ ಇಳಿಯುವ ಲಕ್ಷಣ ಕಾಣಿಸುತ್ತಿಲ್ಲ. ಬೆಳೆಗಾರರಿಗೆ ಉತ್ತಮ ಧಾರಣೆ ಸಿಗುತ್ತದೆ. ಜನವರಿ ವರೆಗೂ ಇದೇ ರೀತಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈರುಳ್ಳಿ ಬೆಲೆ ನಿಯಂತ್ರಿಸುವ ಸಲುವಾಗಿ ಟರ್ಕಿಯಿಂದ ಸಾವಿರಾರು ಟನ್ ಈರುಳ್ಳಿ ಆಮದು ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ.

120 – 140 ರೂಪಾಯಿ ಆಸುಪಾಸಿನಲ್ಲಿದ್ದ ಈರುಳ್ಳಿ ಬೆಲೆ ಈಗ ದ್ವಿಶತಕದತ್ತ ದಾಪುಗಾಲಿಡುತ್ತಿದ್ದು, ಬೆಳಗಾವಿ ಎಪಿಎಂಸಿ ಮಾರುಕಟ್ಟೆಯಲ್ಲಿ ನೆನ್ನೆ ಕೆಜಿ ಈರುಳ್ಳಿ ಬೆಲೆ 180 ರೂಪಾಯಿ ತಲುಪಿದೆ.

ದೊಡ್ಡ ಗಾತ್ರದ ಈರುಳ್ಳಿ ಕ್ವಿಂಟಾಲ್ ಗೆ 18 ಸಾವಿರ ರೂಪಾಯಿಗಳಿಗೆ ಮಾರಾಟವಾಗಿದ್ದು, ಸಣ್ಣ ಹಾಗೂ ಮಧ್ಯಮ ಗಾತ್ರದ ಈರುಳ್ಳಿ ಪ್ರತಿ ಕ್ವಿಂಟಾಲ್ ಗೆ 11 ಸಾವಿರದಿಂದ ದಿಂದ 15 ಸಾವಿರ ರೂಪಾಯಿಗಳವರೆಗೆ ಮಾರಾಟವಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos