ಬಿಜೆಪಿ ಪರವಾಗಿ ಅಲೆ ಎದ್ದು ಕಾಣುತ್ತಿದೆ.

ಬಿಜೆಪಿ ಪರವಾಗಿ ಅಲೆ ಎದ್ದು ಕಾಣುತ್ತಿದೆ.

ಕೆ.ಆರ್.ಪುರ, ಡಿ. 02: ಕ್ಷೇತ್ರದಲ್ಲಿ ಬಿಜೆಪಿ ಪರವಾದ ಅಲೆ ಎದ್ದು ಕಾಣುತ್ತಿದೆ, ಅದೇರೀತಿ ರಾಮಮೂರ್ತಿ ನಗರದ ಅಂಬೇಡ್ಕರ್ ನಗರದಲ್ಲಿ ಅಪಾರ ಸಂಖ್ಯೆಯಲ್ಲಿ ಯುವಕರು, ಮಹಿಳೆಯರು ಬಿಜೆಪಿ ಪಕ್ಷವನ್ನು ಬೆಂಬಲಿಸುವ ಮೂಲಕ ಹೆಚ್ಚಿನ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ್ ಅವರು ಗೆಲುವು ಸಾದಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಹಿಟಾಚಿ ಮಂಜುನಾಥ್ ಅಭಿಪ್ರಾಯ ಪಟ್ಟಿದ್ದಾರೆ.

ಕ್ಷೇತ್ರದ ರಾಮಮೂರ್ತಿ ನಗರದ ಅಂಬೇಡ್ಕರ್ ನಗರ, ಆಲದ ಮರ ವೃತ್ತ, ಕಲ್ಕೆರೆ ಮುಖ್ಯರಸ್ತೆ ಸೇರಿದಂತೆ ಇತರೆ ಭಾಗಗಳಲ್ಲಿ ಬಿಜೆಪಿ ಪರ ಮತಯಾಚನೆ ಮಾಡಿ ಮಾತನಾಡಿದ ಅವರು,

ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ್ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ, ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಬಸವರಾಜ್ ಅವರನ್ನು ಬೆಂಬಲಿಸುವಂತೆ ಕೋರಿದರು.

ಫ್ರೆಶ್ ನ್ಯೂಸ್

Latest Posts

Featured Videos