ವಿಶ್ವವಿಖ್ಯಾತ ಮೈಸೂರು ಅರಮನೆಯ ಭವ್ಯ ವೈಭವ

ವಿಶ್ವವಿಖ್ಯಾತ ಮೈಸೂರು ಅರಮನೆಯ ಭವ್ಯ ವೈಭವ

ಮೈಸೂರು, ಸೆ. 12: ಅರಮನೆಗಳ ನಗರಿ ಎಂದೇ ಪ್ರಸಿದ್ಧವಾಗಿರುವ ಮೈಸೂರಿನಲ್ಲಿ ಅಂಬಾವಿಲಾಸ ಅರಮನೆ ಸೂಜಿಗಲ್ಲಿನಂತೆ ಸೆಳೆಯುತ್ತದೆ. ಮೈಸೂರು ಸಂಸ್ಥಾನವನ್ನು ಶತಮಾನಗಳ ಕಾಲ ಆಳಿದ ಒಡೆಯರ್ ವಂಶದ ಅರಸರ ಖಾಸಗಿ ನಿವಾಸ ಮತ್ತು ದರ್ಬಾರ್ ಹಾಲ್ ಆಗಿತ್ತು ಈ ಅಂಬಾ ವಿಲಾಸ ಅರಮನೆ.

ಕರುನಾಡ ಹೆಮ್ಮೆಯ ರಾಜಮನೆತನಗಳಲ್ಲಿ ಮೈಸೂರು ಒಡೆಯರ ವಂಶವೂ ಒಂದು. ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಅರಮನೆಗಳ ನಗರಿ ಎಂದು ಖ್ಯಾತವಾಗಿದ್ದೇ ಒಡೆಯರ ಕಾಲದಲ್ಲಿ. ಮೈಸೂರು ಮಲ್ಲಿಗೆ, ನಂಜನಗೂಡು ಬಾಳೆ ಹಾಗೂ ಸಹೃದಯಿ ವೀಳೆಯದೆಲೆ! ಮೈಸೂರು ದಸರೆಯಷ್ಟೇ ಮೈಸೂರು ಅರಮನೆಯೂ ವಿಶ್ವವಿಖ್ಯಾತ.

ಭಾರತೀಯ ಸಾಂಪ್ರದಾಯಿಕ ವಾಸ್ತುಶಿಲ್ಪದಿಂದ ಒಡಮೂಡಿದ ಸುಂದರ ಸೌಧ, ಬ್ರಿಟಿಷರು ಭಾರತದಲ್ಲಿ ಬಲವಾದ ಹಿಡಿತ ಹೊಂದಿದ್ದ ಕಾಲದಲ್ಲಿ ಹಾಗೂ ಆಧುನಿಕತೆಯ ಗಾಳಿ ಬೀಸುತ್ತಿದ್ದ ಕಾಲದಲ್ಲಿ ನಿರ್ಮಾಣವಾದ ಭವ್ಯ ಬಂಗಲೆ.

ನಿರ್ಮಾಣದ ಹಿಂದೆ ವೈಭವದ ಕಥೆ ಇಂಡೋ ಸಾರ್ಸನಿಕ್ ಶೈಲಿಯಲ್ಲಿ ಅಂಬಾವಿಲಾಸ ಅರಮನೆಯನ್ನು ಕಲ್ಲಿನಲ್ಲಿ ಕಟ್ಟಲಾಗಿದೆ. ಮೂರು ಮಹಡಿಗಳಿರುವ ಅರಮನೆಯ ಸುತ್ತಲೂ ವಿಶಾಲವಾದ ಹಸಿರು ಉದ್ಯಾನವಿದೆ.

ಕಂಬಗಳಿಗೆ ಕೆಂಪು ಅಮೃತಶಿಲೆಯ ಹೊದಿಕೆ. ಒಳಗೆಲ್ಲಾ ಚಿನ್ನದ ಲೇಪನದ ಕಲಾ ವೈಭವ. ಮೈಸೂರು ಸಂಸ್ಥಾನ 1399 ರಿಂದ 1947 ರಲ್ಲಿ ಭಾರತದ ಸ್ವಾತಂತ್ರ್ಯದವರೆಗೂ ‘ಒಡೆಯರ್ ವಂಶದ ಅರಸ’ರಿಂದ ಆಳಲ್ಪಟ್ಟಿತು. ಒಡೆಯರ್ ಅರಸರು 14 ನೆಯ ಶತಮಾನದಲ್ಲಿಯೇ ಮೈಸೂರಿನಲ್ಲಿ ಅರಮನೆಯನ್ನು ಕಟ್ಟಿಸಿದ್ದರು. 1638 ರಲ್ಲಿ ಸಿಡಿಲು ಹೊಡೆದು ಭಾಗಶಃ ಹಾಳಾಯಿತು. ರಿಪೇರಿ ಮಾಡಿ ವಿಸ್ತರಿಸಲಾಗಿತ್ತು. 1912ರಲ್ಲಿ ಎದ್ದುನಿಂತ ಈಗಿನ ಅರಮನೆ. ಆದರೆ 18ನೆಯ ಶತಮಾನದ ಕೊನೆಯ ಹೊತ್ತಿಗೆ ಅರಮನೆ ಮತ್ತಷ್ಟು ಹಾಳಾಗಿ 1793 ರಲ್ಲಿ ಟಿಪ್ಪು ಸುಲ್ತಾನ್ ಕಾಲದಲ್ಲಿ ಬೀಳಿಸಲಾಯಿತು.

1803ರಲ್ಲಿ ಇನ್ನೊಂದು ಅರಮನೆಯನ್ನು ಅದರ ಸ್ಥಳದಲ್ಲಿ ಕಟ್ಟಿಸಲಾಯಿತು. ಅರಮನೆ 1897 ರಲ್ಲಿ ರಾಜಕುಮಾರಿ ಜಯಲಕ್ಷಮ್ಮಣ್ಣಿ ಮದುವೆಯ ಸಂದರ್ಭದಲ್ಲಿ ಬೆಂಕಿ ಬಿದ್ದು ನಾಶವಾಯಿತು. 1912 ರಲ್ಲಿ ಅರಮನೆ ನಿರ್ಮಾಣ ಕಾರ್ಯ ಸಂಪೂರ್ಣವಾಯಿತು.

ತಜ್ಞರಿಂದ ನೀಲನಕ್ಷೆ: 72 ಎಕರೆ ಪ್ರದೇಶದಲ್ಲಿ ಹಿಂದೂ, ಇಸ್ಲಾಮಿಕ್ ಹಾಗೂ ಪಾಶ್ಚಿಮಾತ್ಯ ವಾಸ್ತುಶೈಲಿಯ ಸಮ್ಮಿಲನದಿಂದ ವೇಸರ (ಇಂಡೋ ಸಾರ್ಸಾನಿಕ್) ಶೈಲಿಯಲ್ಲಿ ಮೈಸೂರು ಅರಮನೆ ಸುಂದರವಾಗಿ ಮೈದಳೆಯಿತು.

ಮೈಸೂರು ಸಂಸ್ಥಾನದ ಆಳ್ವಿಕೆಯ ಹೊಣೆಯನ್ನು ಹೊತ್ತಿದ್ದ ವಾಣಿವಿಲಾಸ ಕೆಂಪನಂಜಮ್ಮಣ್ಣಿ ಅರಮನೆ ನಿರ್ಮಾಣದ ದಿಟ್ಟ ನಿರ್ಧಾರ ತಳೆದರೆಂಬುದು ವಿಶೇಷ ಅಂಶ. ಅರಮನೆಗೆ ಬ್ರಿಟಿಷ್ ವಾಸ್ತುಶಿಲ್ಪಿ ಹೆನ್ರಿ ಇರ್ವಿನ್ ನಕಾಶೆ ತಯಾರಿಸಿದರೆಂದು ಇತಿಹಾಸ ಹೇಳುತ್ತದೆ.

ಅರಮನೆ ನಗರಿ ಎಂಬ ಹೆಸರು ಬಂದಿದ್ದೇ ಇದರಿಂದ! ಅರಮನೆಯ ಮುಂಭಾಗದಲ್ಲಿ ಏಳು ವಿಶಾಲವಾದ ಮತ್ತು ಎರಡು ಚಿಕ್ಕ ಕಮಾನುಗಳಿವೆ. ಮಧ್ಯದ ಕಮಾನಿನ ಮೇಲಿರುವ ಗಜಲಕ್ಷ್ಮಿಯ ಶಿಲ್ಪ ಹೃದಯಂಗಮವಾಗಿದೆ.

ಮೈಸೂರಿಗೆ ಅರಮನೆಗಳ ನಗರಿ ಎಂದು ಹೆಸರು ಬರಲು ಮೂರು ಅಂತಸ್ತಿನ ಈ ಭವ್ಯ ಸೌಧದ ಕೊಡುಗೆ ಅಪಾರ. ಚಚ್ಚೌಕದ ಕಂಬಗಳು, ಮೇಲೆ ಸುಂದರ ವಿನ್ಯಾಸದ ಗೋಪುರ, ವಿಶಾಲವಾದ ಮೈದಾನ, ಸುಂದರ ಹಾಗೂ ಮನಮೋಹಕ ಶಿಲ್ಪಗಳಿಂದ, ನುಣುಪಾದ ನೆಲಹಾಸು, ಗಾಜಿನ ಅಲಂಕಾರಿಕ ವಿನ್ಯಾಸದಿಂದ ಕೂಡಿದ ದರ್ಬಾರ್ ಹಾಲ್, ಅರಮನೆಯ ಸುತ್ತ ಇರುವ ಸಿಂಹ ಲಾಂಛನಗಳು, ಸುಂದರ ಶಿಲ್ಪದ ಪ್ರವೇಶದ್ವಾರದ ನೋಟವೇ ಒಂದು ಸೊಬಗು.

ಮೈಸೂರು ಸಿಲ್ಕ್: ಸೀರೆ ಹಿಂದಿದೆ ಕುತೂಹಲಕಾರಿ ಕಥೆ ಅರಮನೆಯ ವಿಶೇಷತೆ ರಾಜರುಗಳು ದರ್ಬಾರು ನಡೆಸುತ್ತಿದ್ದ, ದರ್ಬಾರ್ ಹಾಲ್, ದಿವಾನ್-ಇ-ಆಮ್ ಕಲ್ಯಾಣ ಮಂಟಪ, ಗೊಂಬೆ ತೊಟ್ಟಿ ಇವುಗಳು ಇತಿಹಾಸವನ್ನು ಸಾರುತ್ತವೆ. ಕಲ್ಯಾಣ ಮಂಟಪದ ಗೋಡೆಯ ಮೇಲೆ ಬರೆದಿರುವ ಚಿತ್ತಾರಗಳು, ತೈಲವರ್ಣದ ಕಲಾಕೃತಿಗಳು ಹಿಂದಿನ ಕಾಲದ ಮೆರವ

ಣಿಗೆ ಮತ್ತು ದಸರಾ ಭವ್ಯತೆಯನ್ನು ಬಿಂಬಿಸುತ್ತವೆ. 84 ಕೆಜಿ ಚಿನ್ನದ ಕುಸುರಿಯಿಂದ ಅಲಂಕರಿಸಿರುವ ಮರದ ಅಂಬಾರಿ ಇದೆ.. 14ನೆ ಶತಮಾನದಲ್ಲಿ ಉಪಯೋಗಿಸಲ್ಪಡುತ್ತಿದ್ದ ಖಡ್ಗ, ಸುರಗಿ, ವ್ಯಾಘ್ರನಖ ಮುಂತಾದ ಆಯುಧಗಳ ತಾಳಕ್ಕೆ 20ನೆಯ ಶತಮಾನದ ಪಿಸ್ತೂಲುಗಳು, ಬ೦ದೂಕುಗಳ ಮೇಳವಿದೆ.

ಮೈಸೂರು ದಸರಾ: ವಜ್ರಮುಷ್ಠಿ ಒಡೆಯರ್ ವ೦ಶದ ಪ್ರಸಿದ್ಧ ಅರಸು ರಣಧೀರ ಕ೦ಠೀರವ ಉಪಯೋಗಿಸಿದ್ದ ಖಡ್ಗಗಳಲ್ಲಿ ಒ೦ದಾದ ‘ವಜ್ರಮುಷ್ಠಿ’ ಇಲ್ಲಿದೆ. ಮೈಸೂರು ಹುಲಿ ಟಿಪು ಸುಲ್ತಾನ್ ಮತ್ತು ಹೈದರ್ ಅಲಿ ಉಪಯೋಗಿಸುತ್ತಿದ್ದ ಖಡ್ಗಗಳು ಕೂಡ ಇವೆ. ಅರಮನೆಯ ಆವರಣದಲ್ಲಿ 12 ದೇವಾಲಯಗಳಿವೆ.

ಸೋಮೇಶ್ವರ ಮತ್ತು ಲಕ್ಷ್ಮೀರಮಣ ದೇವಾಲಯಗಳು ಸುಪ್ರಸಿದ್ಧ. 14ನೆ ಶತಮಾನದಲ್ಲಿ ನಿರ್ಮಾಣವಾಗಿರುವ ಕೋಡಿಭೈರವನ ದೇವಾಲಯ ಅತ್ಯಂತ ಪುರಾತನವಾಗಿದೆ. ದಿನನಿತ್ಯ ದೀಪಾಲಂಕಾರದಿಂದ ಕಂಗೊಳಿಸುವ ಅರಮನೆಗೆ ದಸರಾ ವೇಳೆ ವಿಶೇಷ ಅಲಂಕಾರ. ಸಾರ್ವಜನಿಕ ವೀಕ್ಷಣೆಗೆ ಅರಮನೆ ಲಭ್ಯ.

ಮೈಸೂರು ಅರಸರ ಕಾಲದ ಗತ ವೈಭವನ್ನು ಕಣ್ಣಲ್ಲಿ ತುಂಬಿಕೊಂಡಷ್ಟೂ ನೋಡಿದಷ್ಟೂ ಮುಗಿಯುವುದಿಲ್ಲ. ಮತ್ತೆ ಮತ್ತೆ ಕಣ್ಮನ ಸೆಳೆಯುತ್ತದೆ ಅಂಬಾ ವಿಲಾಸ ಅರಮನೆ. ಮೈಸೂರು ಅರಮನೆಯು 97ಸಾವಿರಕ್ಕೂ ಹೆಚ್ಚು ವಿದ್ಯುತ್ ದೀಪಗಳಿಂದ ಕಂಗೊಳಿಸುವಾಗ ಸೊಬಗು ಬಲ್ಲವನೇ ಬಲ್ಲನೇನೋ! ಮೊದಲೇ ಸುಂದರವಾಗಿರುವ ಮೈಸೂರು ಅರಮನೆಗೆ ಮತ್ತಷ್ಟು ಶೋಭೆ ಬಂದದ್ದು ರಾಜಾ ರವಿವರ್ಮನ ಚಿತ್ರಗಳಿಂದ.  ಖ್ಯಾತ ಶಿಲ್ಪಿ ವೆಂಕಟಪ್ಪನವರ ಕೊಡುಗೆಯೂ ಅರಮನೆಗೆ ಅಪಾರವಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos