ವಿಶ್ವದ ಅತಿದೊಡ್ಡ ಸ್ಟೇಡಿಯಂ…!

ವಿಶ್ವದ ಅತಿದೊಡ್ಡ ಸ್ಟೇಡಿಯಂ…!

ಅಹಮದಾಬಾದ್ , ಡಿ. 13 : ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಎಂಬ ಹೆಗ್ಗಳಿಕೆ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಎರಡನೇ ಸ್ಥಾನಕ್ಕೆ ಸೀಮಿತಗೊಳ್ಳಲಿದೆ.
ಗುಜರಾತ್ ನ ಅಹಮದಾಬಾದ್ ನಲ್ಲಿ ನಿರ್ಮಿಸಿರುವ ಕ್ರಿಕೆಟ್ ಸ್ಟೇಡಿಯಂ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ.
ಅಹಮದಾಬಾದ್ನ ಹೊಸ ಕ್ರಿಕೆಟ್ ಕ್ರೀಡಾಂಗಣ ಮುಂದಿನ ವರ್ಷದ ಆರಂಭದಲ್ಲಿ ಅಂತರರಾಷ್ಟ್ರೀಯ ಪಂದ್ಯವನ್ನು ಆಯೋಜಿಸಲು ಸಜ್ಜಾಗಿದೆ. ಸುಮಾರು ೭೦೦ ಕೋಟಿ ರೂ.ಗಳ ವೆಚ್ಚದಲ್ಲಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಕ್ರೀಡಾಂಗಣದ ಸಾಮರ್ಥ್ಯ ಒಂದು ಲಕ್ಷ ೧೦ ಸಾವಿರ.
ಅಹಮದಾಬಾದ್ನ ಹೊಸ ಕ್ರೀಡಾಂಗಣ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದ ಒಂದು ಲಕ್ಷ ಸಾಮರ್ಥ್ಯವನ್ನು ಮೀರಿಸಲು ಸಜ್ಜಾಗಿದೆ. ಇದು ೭೦ ಕಾರ್ಪೊರೇಟ್ ಬಾಕ್ಸ್ ಗಳು ಮತ್ತು ನಾಲ್ಕು ಡ್ರೆಸ್ಸಿಂಗ್ ರೂಂಗಳನ್ನು ಒಳಗೊಂಡಿದೆ. ಮತ್ತೊಂದೆಡೆ, ಇದು ಒಲಿಂಪಿಕ್ಸ್ ಗಾತ್ರದ ಈಜುಕೊಳವನ್ನೂ ಒಳಗೊಂಡಿದೆ

ಫ್ರೆಶ್ ನ್ಯೂಸ್

Latest Posts

Featured Videos