ಮತ ಚಲಾಯಿಸಿದ ತುಷಾರ್ ಗಿರಿ ನಾಥ್ ದಂಪತಿ

ಮತ ಚಲಾಯಿಸಿದ ತುಷಾರ್ ಗಿರಿ ನಾಥ್ ದಂಪತಿ

ಬೆಂಗಳೂರು: ಲೋಕಸಭೆ ಚುನಾವಣೆ 2024ರ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ರಾಜ್ಯದಲ್ಲಿ ಬೆಳಿಗ್ಗೆಯಿಂದಲೇ ಮತದಾರರು ಭರ್ಜರಿ ರೆಸ್ಪಾನ್ಸ್ ಕೊಟ್ಟಿದಾರೆ.  ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಾದ  ಶ್ರೀ ತುಷಾರ್ ಗಿರಿ ನಾಥ್ ರವರು ಹಾಗೂ ಪತ್ನಿಯಾದ ಶ್ರೀಮತಿ ಮನಿಕಾ ಗಿರಿ ನಾಥ್ ರವರು ಇಂದು ಬೆಳಗ್ಗೆ 7.40ಕ್ಕೆ ಜಕ್ಕೂರು ಮಾದರಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos