ಇದೇ ನನ್ನ ಕೊನೆಯ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ

ಇದೇ ನನ್ನ ಕೊನೆಯ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, 4, ನ್ಯೂಸ್ಎಕ್ಸ್ ಪ್ರೆಸ್‍: ‘ನನಗೂ ವಯಸ್ಸಾಗಿದೆ. ಇದೇ ನನ್ನ ಕೊನೆಯ ಚುನಾವಣೆ’ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 2019ರ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸಲು ಬಿಜೆಪಿ ಡಾ.ಉಮೇಶ್ ಜಾಧವ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಿದೆ.

ಸೇಡಂನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮಾಡಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ‘9 ಬಾರಿ ಶಾಸಕನಾಗಿ, ಎರಡು ಬಾರಿ ಸಂಸದನಾಗಿ ಸತತ 11 ಬಾರಿ ಜನರು ಆಯ್ಕೆ ಮಾಡಿದ್ದಾರೆ. ಈ ಬಾರಿಯೂ ಗೆದ್ದರೆ ಒಂದು ಡಜನ್ ಬಾರಿ ಗೆದ್ದು ದಾಖಲೆ ಮಾಡಿದಂತಾಗುತ್ತದೆ’ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲು ಅನುಕಂಪದ ಆಧಾರದ ಮೇಲೆ ಮತಗಳನ್ನು ಸೆಳೆಯಲು ನಿವೃತ್ತಿಯ ಮಾತನಾಡಿದರೇ? ಬಿಜೆಪಿ ಖರ್ಗೆ ಅವರನ್ನು ಈ ಬಾರಿ ಸೋಲಿಸಲೇಬೇಕು ಎಂದು ಪಣ ತೊಟ್ಟಿದೆ.

ಫ್ರೆಶ್ ನ್ಯೂಸ್

Latest Posts

Featured Videos