ಜೀತ ಪದ್ಧತಿಯನ್ನ ರದ್ದು ಮಾಡಿದವರೇ ದೇವರಾಜ ಅರಸು: ಸಿಎಂ

ಜೀತ ಪದ್ಧತಿಯನ್ನ ರದ್ದು ಮಾಡಿದವರೇ ದೇವರಾಜ ಅರಸು: ಸಿಎಂ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು, ರಾಜ್ಯ ಕಂಡಂಥ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು. ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು (ಶುಕ್ರವಾರ ಜೂನ್‌ 06) ರಂದು ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಮಾಜಿ ಸಿಎಂ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿವಂಗತ ದೇವರಾಜ ಅರಸು ಅವರ ಪುಣ್ಯ ತಿಥಿಯಂದು ಸರ್ಕಾರ ಹಾಗೂ 7 ಕೋಟಿ ಕನ್ನಡಿಗರ ವತಿಯಿಂದ ಅವರ ಪ್ರತಿಮೆಗೆ  ಮಾಲಾರ್ಪಣೆ ಮಾಡಿ ಗೌರವ ಸೂಚಿಸಿ ಸ್ಮರಿಸಿಕೊಂಡಿದೆ ಎಂದರು.

ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಇಟ್ಟವರು. ನಿರ್ಗತಿಕರು, ಭೂ ರಹಿತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿ ಮಾಡಿ ಭೂರಹಿತರನ್ನು ಭೂ ಒಡೆಯರಾಗಿಸಿದರು. ಜೀತ ಪದ್ಧತಿಯನ್ನು ರದ್ದು ಮಾಡಿ, ಮಲ ಹೊರುವ ಪದ್ಧತಿಯನ್ನು ನಿಲ್ಲಿಸಿದರು.   ಅವರ ಕಾರ್ಯಕ್ರಮಗಳ ಉದ್ದನೆಯ ಪಟ್ಟಿಯೇ ಇದೆ.   ದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು ಅವರಿಂದಾಗಿ ಬಡತನ ನಿರ್ಮೂಲನಾ ಕಾರ್ಯಕ್ರಮ ಕರ್ನಾಟಕದಲ್ಲಿ ಅಚ್ಚುಕಟ್ಟಾಗಿ ನೆರವೇರಿತು. ರಾಜಕೀಯದಲ್ಲಿ ಅವಕಾಶ ಸಿಗದ ಜನಾಂಗದವರಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟರು. ಹಾವನೂರು ಆಯೋಗವನ್ನು ರಚನೆ ಮಾಡಿ, ಅದರ ವರದಿ ಪಡೆದು ಜಾರಿ ಮಾಡಿ ಉದ್ಯೋಗದಲ್ಲಿ ಮೀಸಲಾತಿ ಕೊಟ್ಟರು ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos