ಚಿಕ್ಕಮಗಳೂರು, ಅ. 25 : ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಬಳಿ ಸಂಭವಿಸಿದೆ.
ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು ಮೃತರ ಹೆಸರು ತಿಳಿದು ಬಂದಿಲ್ಲ. ಗಂಭೀರ ಗಾಯಗೊಂಡವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.