ಕರೆಂಟ್ ಶಾಕ್ ಗೆ ಮೂವರು ಸ್ಥಳದಲ್ಲೇ ಸಾವು

ಕರೆಂಟ್ ಶಾಕ್ ಗೆ ಮೂವರು ಸ್ಥಳದಲ್ಲೇ ಸಾವು

ಕೊಪ್ಪಳ, ಸೆ. 13: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಮೇಲೆ ವಿದ್ಯುತ್ ತಂತಿ ಬಿದ್ದ ಪರಿಣಾಮ ತಂದೆ ಹಾಗೂ 2 ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹನುಮಪ್ಪ ಬೀರಪ್ಪನವರ (30), ಮಕ್ಕಳುಗಳಾದ ಪ್ರಿಯಾಂಕಾ (4) ಮತ್ತು ಬೀರಪ್ಪ (2) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಹೊಲದಲ್ಲಿ ರಾಶಿ ಮಾಡಲು ಇವರು ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ವಿದ್ಯುತ್ ತಂತಿ ತುಂಡಾಗಿ ಟ್ರ್ಯಾಕ್ಟರ್ ಮೇಲೆ ಬಿದ್ದಿತ್ತು ಎನ್ನಲಾಗಿದೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos