GT ವಿರುದ್ದ ರೋಚಕ ಜಯ ಸಾಧಿಸಿದ PBKS

GT ವಿರುದ್ದ ರೋಚಕ ಜಯ ಸಾಧಿಸಿದ PBKS

ಬೆಂಗಳೂರು: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ ನಿನ್ನೆ ನಡೆದ 17ನೇ ಪಂದ್ಯದಲ್ಲಿ ಅತಿಥೇಯ ಗುಜರಾತ್ ಟೈಟನ್ಸ್ ಹಾಗೂ ಪಂಜಾಬ್ ಕಿಂಗ್ಸ್  ತಂಡಗಳು ಮುಖಾಮುಖಿಯಾಗಿತ್ತು. ಗುಜರಾತ್ ಟೈಟನ್ಸ್  ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು 3 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ ಗುಜರಾತ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಶುಭ್ಮನ್ ಗಿಲ್ ಮತ್ತು ವೃದ್ಧಿಮಾನ್ ಸಹಾ ಉತ್ತಮ ಆರಂಭ ನೀಡಲಾಗಲಿಲ್ಲ. ಸಾಯಿ ಸುದರ್ಶನ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿ 19 ಎಸೆತಗಳನ್ನು ಎದುರಿಸಿ 6 ಬೌಂಡರಿಗಳ ನೆರವಿನಿಂದ 33 ರನ್ ಬಾರಿಸಿದರು. ಇನ್ನು ನಾಯಕ ಶುಭ್ಮನ್ ಗಿಲ್ 48 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಹಾಯದಿಂದ 89 ರನ್ ಬಾರಿಸಿ ಅಜೇಯರಾಗುಳಿದರು.

ನಾಯಕನ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್‌ಗಳನ್ನು ಗಳಿಸಿತ್ತು.

200 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡ ಶಶಾಂಕ್ ಸಿಂಗ್ ಮತ್ತು ಅಶುತೋಷ್ ಶರ್ಮಾ ಅವರ ಭರ್ಜರಿ ಬ್ಯಾಟಿಂಗ್ ಸಾಹಸದ ನೆರವಿನಿಂದ 19.5 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ನಿಗದಿತ ಗುರಿ ತಲುಪಿ ಭರ್ಜರಿ ಗೆಲುವು ದಾಖಲಿಸಿತು.

ಪಂದ್ಯದ ರೋಚಕ ತಿರುವಿನಲ್ಲಿ ಕೊನೆಯ ಓವರ್‌ನಲ್ಲಿ 7 ರನ್‌ಗಳು ಬೇಕಾಗಿದ್ದಾಗ ಪಂಜಾಬ್ ಕಿಂಗ್ಸ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಮ್ಯಾಚ್-ವಿನ್ನಿಂಗ್ ಪ್ರದರ್ಶನ ನೀಡಿದರು. ಮೊದಲ ವಿಕೆಟ್‌ಗೆ 1.1 ಓವರ್‌ಗಳಲ್ಲಿ 13 ರನ್ ಸೇರಿಸಿದರು. ಶಿಖರ್ ಧವನ್ ಕೇವಲ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಪಂದ್ಯ-ವಿಜೇತ ಪ್ರದರ್ಶನ ನೀಡಿದ ಶಶಾಂಕ್ ಸಿಂಗ್ 29 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಮೂಲಕ ಅಜೇಯ 61 ರನ್ ಬಾರಿಸಿದರು. ಇವರಿಗೆ ಸಾಥ್ ನೀಡಿದ ಅಶುತೋಷ್ ಶರ್ಮಾ 17 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 31 ರನ್ ಗಳಿಸಿ ತಂಡವನ್ನು ಗೆಲುವಿನ ದಡ ತಲುಪಿಸಲು ನೆರವಾದರು.

 

ಫ್ರೆಶ್ ನ್ಯೂಸ್

Latest Posts

Featured Videos