ಹಬ್ಬದ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳ ಟಿಕೆಟ್ ದರದಲ್ಲಿ ಭಾರೀ ಏರಿಕೆ!

ಹಬ್ಬದ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳ ಟಿಕೆಟ್ ದರದಲ್ಲಿ ಭಾರೀ ಏರಿಕೆ!

ಬೆಂಗಳೂರು: ರಾಜ್ಯದಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಎಲ್ಲರೂ ಊರಿಗೆ ಹೋಗುವುದು ಹೆಚ್ಚಾಗಿದೆ. ಇದನ್ನೇ ಬಳಸಿಕೊಂಡಿರುವಂತಹ ಖಾಸಗಿ ಬಸ್ ಗಳು ಟಿಕೆಟ್ ದರದಲ್ಲಿ ಬಾರಿ ಏರಿಕೆ ಮಾಡಲಾಗಿದೆ. ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಪ್ರಯಾಣಿಕರಿಗೆ ದುಪ್ಪಟ್ಟು ಹಣ ವಸಲಿ ಮಾಡುತ್ತಿದ್ದಾರೆ.
ಗಣೇಶ ಚತುರ್ಥಿ ಹಬ್ಬವನ್ನು ವಿಜ್ರಂಭಣೆಯಿಂದ ಆರಚಿಸಲು ಇಡೀ ದೇಶವೇ ಸಜ್ಜಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಖಾಸಗಿ ಬಸ್ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್ಗಳ ದರ ಹೆಚ್ಚಿಸಲಾಗಿದೆ.
ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ಗಳು ಪ್ರಯಾಣಿಕರಿಗೆ ದುಪಟ್ಟು ಹಣ ವಸೂಲಿ ಮಾಡುತ್ತವೆ. ಹೀಗಾಗಿ ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೂ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಮಾಡಿದೆ.
ಈ ಕಾರಣಕ್ಕೆ ಶನಿವಾರದಿಂದಲ್ಲೇ ಜನ ತಮ್ಮ ತಮ್ಮ ಊರಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡು ಖಾಸಗಿ ಬಸ್ ಟಿಕೆಟ್ ದರಗಳನ್ನು ದುಪ್ಪಟ್ಟು ಹೆಚ್ಚಳ ಮಾಡಿದ್ದಾರೆ.
ಹಬ್ಬ ಹರಿದಿನಗಳಲ್ಲಿ, ವಾರಾಂತ್ಯದ ದಿನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡುತ್ತಿರುವುದಾಗಿ ಪ್ರಯಾಣಿಕರಿಂದ ದೂರುಗಳು ಬಂದ ಹಿನ್ನೆಲೆ ರಾಜ್ಯ ಸಾರಿಗೆ ಇಲಾಖೆಯಿಂದ ಖಾಸಗಿ ಬಸ್ ಮಾಲೀಕರಿಗೆ, ಆನ್ಲೈನ್ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos