HDK ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್ ಗೆ ಟಿಕೆಟ್: ಡಿ.ಕೆ.ಸುರೇಶ್

HDK ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್ ಗೆ ಟಿಕೆಟ್: ಡಿ.ಕೆ.ಸುರೇಶ್

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು.

ಸದಾಶಿವನಗರದ ನಿವಾಸದಲ್ಲಿಇಂದು (ಶುಕ್ರವಾರ ಅ. 25) ರಂದು ನಡೆದ ಮಾಧ್ಯಮಗೋಷ್ಟಿಯನ್ನು  ಉದ್ದೇಶಿಸಿ ಸುರೇಶ್ ಮಾತನಾಡಿದ ಅವರು, ಹಿರಿಯ ರಾಜಕಾರಣಿಯಾದ ಕುಮಾರಸ್ವಾಮಿ ಅವರು ಕಳೆದ 40 ವರ್ಷಗಳಿಂದ ಅವರ ದೃಷ್ಟಿಕೋನದಲ್ಲಿ ತಂತ್ರಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಇದರ ಮುಂದುವರೆದ ಭಾಗವಿದು. ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುತ್ತಾರೆ ಎನ್ನುವುದು ಚನ್ನಪಟ್ಟಣದ ಎಲ್ಲರಿಗೂ ತಿಳಿದಿದ್ದ ಸತ್ಯ ಎಂದರು

ನಿಖಿಲ್ ಕುಮಾರಸ್ವಾಮಿ ಅವರೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಾರೆ ಎನ್ನುವ ಸತ್ಯ ಎಲ್ಲರಿಗೂ ತಿಳಿದಿತ್ತು. ಜೆಡಿಎಸ್ ಪಕ್ಷಕ್ಕೆ ಕುಮಾರಸ್ವಾಮಿ ಅವರೇ ಅಧಿನಾಯಕರು. ಎಲ್ಲವೂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಲವಂತವಾಗಿ ಚುನಾವಣೆಗೆ ನಿಖಿಲ್ ಅವರನ್ನು ನಿಲ್ಲಿಸಲಾಗುತ್ತಿದೆ ಎನ್ನುವುದೆಲ್ಲಾ ಸುಳ್ಳು, ಅವರ ಉದ್ದೇಶ ಈ ಮೂಲಕ ಫಲ ನೀಡಿದೆ ಎಂದರು.

ಕಣ್ಣೀರಿನ ನಾಟಕ ಪ್ರಾರಂಭವಾಗುತ್ತದೆ

ನಾಟಕ ಮಾಡಿ ನಿಖಿಲ್ ಗೆ ಟಿಕೆಟ್ ಗಳಿಸಿಕೊಂಡರೇ ಎಂಬುವುದನ್ನುಮಾಧ್ಯಮದವರು ಹೇಳಬೇಕು. ನಾಮಪತ್ರ ಸಲ್ಲಿಸಿದ ನಂತರ ನಾಟಕ ಪ್ರಾರಂಭವಾಗುತ್ತದೆ ಎಂದರು.

ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದರಿಂದ ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರ ಮೇಲಿನ ಪ್ರೀತಿ ಎಷ್ಟಿದೆ ಎಂಬುದು ತಿಳಿಯುತ್ತದೆ. ಚುನಾವಣೆಯಲ್ಲಿ ಒಂದೊಂದು ಮತವೂ ಮುಖ್ಯ ಎಂದು ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಯಾರು ಪ್ರಭಾವಿಗಳು ಎನ್ನುವುದಕ್ಕಿಂತ, ನಾವು ಪಕ್ಷವನ್ನು ಗೆಲ್ಲಿಸಲು ಹೋರಾಟ ಮಾಡುತ್ತೇವೆ ಎಂದರು.

ದೇವೇಗೌಡರು ಇರುವುದೇ ಪ್ರಚಾರಕ್ಕೆ

ದೇವೇಗೌಡರು ಇರುವುದೇ ಪ್ರಚಾರ ಮಾಡುವುದಕ್ಕೆ. ಅವರ ಮೊಮ್ಮಗನ ಪರವಾಗಿ ಪ್ರಚಾರ ಮಾಡಬೇಡಿ ಎಂದು ಹೇಳಲು ಆಗುತ್ತದೆಯೇ?. ನಾವು ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು.

ಪಕ್ಷದಲ್ಲಿ ಸಣ್ಣ ಬೇಸರವಿದೆ ಹೊರತು ಯಾವುದೇ ಅಸಮಾಧಾನವಿಲ್ಲ. ನಾನು ಮೊದಲಿನಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇ, ಮಾಧ್ಯಮದವರೇ ನನ್ನ ಹೀರೋ ಮಾಡುತ್ತಿದ್ದಾರೆ ಎಂದರು.

ಯಾರೇ ಪಕ್ಷಕ್ಕೂ ಬಂದರೂ ಸ್ವಾಗತ

ನಮ್ಮ ಸರ್ಕಾರಕ್ಕೆ ಸಂಖ್ಯೆಯ ಅವಶ್ಯಕತೆಯಿಲ್ಲ. ಯಾರೇ ಪಕ್ಷಕ್ಕೂ ಬಂದರೂ ಸ್ವಾಗತಿಸುತ್ತೇವೆ. ಇದು ಚುನಾವಣಾ ತಂತ್ರದ ಒಂದು ಭಾಗ. ಇದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಈಗಾಗಲೇ ಅನೇಕರು ಪಕ್ಷ ಸೇರಿದ್ದಾರೆ. ನಮ್ಮ ಪಕ್ಷದ ಸಿದ್ದಾಂತ ಒಪ್ಪಿ ಬಂದವರನ್ನು ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos