ತುಮಕೂರಿನಲ್ಲಿ ಎಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಕೆ

ತುಮಕೂರಿನಲ್ಲಿ ಎಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಕೆ

ತುಮಕೂರು, ಮಾ.25, ನ್ಯೂಸ್ ಎಕ್ಸ್ ಪ್ರೆಸ್: ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ತುಮಕೂರಿನ ಸರ್ಕಾರಿ ಕಾಲೇಜು ಮೈದಾನದಿಂದ ಡಿಸಿ ಕಚೇರಿವರೆಗೂ ದೇವೇಗೌಡ ಅವರು ತೆರೆದ ವಾಹನದಲ್ಲಿ ರೋಡ್​ ಶೋ ನಡೆಸಿದರು. ಬಳಿಕ ಅವರು ತೆರೆದ ವಾಹನದಿಂದ‌ ಇಳಿದು ಡಿಸಿ ಕಚೇರಿಗೆ ಕಾರಿನಲ್ಲಿ ಆಗಮಿಸಿ, ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ದೇವೇಗೌಡರಿಗೆ ಡಿಸಿಎಂ ಡಾ.ಜಿ ಪರಮೇಶ್ವರ್ ಹಾಗೂ ಮಾಜಿ ಶಾಸಕ ಕೆಕೆ ಷಡಕ್ಷರಿ ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos