ಬೆಂಗಳೂರು, ಮಾ.23, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಸೋಮವಾರದಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಅಲ್ಲದೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಎಲ್ಲಾ ಅಂತಿಮವಾಗಿದೆ. ಮೈತ್ರಿ ಸರ್ಕಾರದಲ್ಲಿ ನಮಗೆ ಯಾವೆಲ್ಲಾ ಕ್ಷೇತ್ರ ಬಿಟ್ಟು ಕೊಡಲಾಗಿದೆಯೋ ಆ ಕ್ಷೇತ್ರಗಳಿಗೆಲ್ಲಾ ನಮ್ಮ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದು ಹೇಳಿದ್ದಾರೆ.