ತುಮಕೂರಿನಿಂದ `ಕೈ’ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮುದ್ದಹನುಮೇಗೌಡ!

ತುಮಕೂರಿನಿಂದ `ಕೈ’ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮುದ್ದಹನುಮೇಗೌಡ!

ತುಮಕೂರು, ಮಾ.25, ನ್ಯೂಸ್ ಎಕ್ಸ್ ಪ್ರೆಸ್: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ರಾಜಕೀಯ ಅಖಾಡ ಮತ್ತಷ್ಟು ರಂಗರೇಲಿದ್ದು, ಇಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದ್ದಾರೆ.

ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹಾಲಿ ಸಂಸದ ಮುದ್ದಹನುಮೇಗೌಡ ಅವರನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದೇ ಮುದ್ದಹನುಮೇಗೌಡ ತುಮಕೂರಿನಿಂದಲೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್, ಹಾಲಿ ಸಂಸದರಿಗೆ ಆಫರ್ ನೀಡಲಾಗಿತ್ತು. ಅಲ್ಲಿ ನಿಮ್ಮನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ದಿನೇಶ್ ಗುಂಡೂರಾವ್ ಆಫರ್ ನೀಡಿದ್ದರು ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos