ಇಂದು ಕಲಬುರಗಿ ಬಂದ್ ಗೆ, ನೀರಸ ಪ್ರತಿಕ್ರಿಯೆ

ಇಂದು ಕಲಬುರಗಿ ಬಂದ್ ಗೆ, ನೀರಸ ಪ್ರತಿಕ್ರಿಯೆ

ಕಲಬುರಗಿ, ಡಿ. 19: ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧ ಪ್ರತಿಭಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ ಇಂದು ಬೆಳಗ್ಗೆ 6 ಗಂಟೆಯಿಂದ ಡಿ.21 ರ ತಡರಾತ್ರಿ 12 ಗಂಟೆಯವರೆಗೆ ರಾಜ್ಯವ್ಯಾಪಿ ನಿಷೇಧಾಜ್ಞೆ ವಿಧಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲಬುರಗಿಯಲ್ಲಿ ಇಂದು ಬಂದ್ಗೆ ಕರೆ ನೀಡಲಾಗಿದ್ದು, ಸಾರ್ವಜನಿಕರಿಂದ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.

ನಗರದಲ್ಲಿ ಬಸ್ ಸೇರಿದಂತೆ ಸಾರಿಗೆ ಸಂಚಾರ ಎಂದಿನಂತಿದ್ದು, ಜನ ಜೀವನ ಸಹಜ ಸ್ಥಿತಿಯಲ್ಲಿದೆ. ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಓಪನ್ ಆಗುತ್ತಿದ್ದು, ವ್ಯಾಪಾರಸ್ಥರು ವಹಿವಾಟು ನಡೆಸುತ್ತಿದ್ದಾರೆ.

ಪೀಪಲ್ಸ್ ಫೋರಂ ಹಾಗೂ ವಿವಿಧ ಸಂಘಟನೆಗಳು ಬಂದ್ ಕರೆ ನೀಡಿದ್ದು, ರಸ್ತೆಗಿಳಿದು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ.

 

ಫ್ರೆಶ್ ನ್ಯೂಸ್

Latest Posts

Featured Videos