ಲಾಕ್‌ಡೌನ್‌ ಆದೇಶ ಪಾಲಿಸಿ

ಲಾಕ್‌ಡೌನ್‌ ಆದೇಶ ಪಾಲಿಸಿ

 ಬೆಂಗಳೂರು, ಏ. 6. ಬೀದರ್‌, ಮೈಸೂರು, ಮಂಗಳೂರು, ಕಲಬುರಗಿ ಜಿಲ್ಲೆಗಳಲ್ಲಿ ಕೊರೋನಾ ವೈರಸ್‌ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಈ ವೈರಸ್‌ ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು, ಸಾರ್ವಜನಿಕವಾಗಿ ಹೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧಗಳನ್ನು ವಿಧಿಸಲಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿದೆ.ಲಾಕ್‌ಡೌನ್‌ ಅವಧಿಯ ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸಿ. ಎಚ್ಚರ ತಪ್ಪಿದರೆ ದೊಡ್ಡ

ಗಂಡಾಂತರವನ್ನೇ ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ರಾಜ್ಯದ ಜನತೆಗೆ ಕಳಕಳಿಯ ಮನವಿ ಮಾಡಿದ್ದಾರೆ.

ಈಗಾಗಲೇ ಕೊರೋನಾ ಸೋಂಕು ನಿಯಂತ್ರಣಕ್ಕೆ ಸಿಗದ ಸ್ಥಿತಿ ತಲುಪಿದೆ. ಆದರೆ, ರಾಜ್ಯದಲ್ಲಿ ಅಂತಹ ಪರಿಸ್ಥಿತಿ ಇಲ್ಲವಾದರೂ ಎಚ್ಚರ ತಪ್ಪಿದರೆ ದೊಡ್ಡ ಗಂಡಾಂತರವನ್ನೇ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ ದೇಶ ವ್ಯಾಪಿ ಲಾಕ್‌ಡೌನ್‌ ಅವಧಿ ಏ.14ರಂದು ಮುಕ್ತಾಯಗೊಳ್ಳುತ್ತಿದ್ದು, ಅದನ್ನು ವಿಸ್ತರಿಸಬೇಕೋ, ಬೇಡವೋ ಎಂಬ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.

ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಜನರು ಲಾಕ್‌ಡೌನ್‌ನ ಹಿಂದಿನ ಆಶಯವನ್ನು ಹಾಗೂ ಲಾಕ್‌ಡೌನ್‌ ಉಲ್ಲಂಘನೆಯಿಂದ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ಅರಿತು ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಆದೇಶ ಪಾಲಿಸಬೇಕಾಗಿದೆ ಎಂದು ಹೇಳಿದ್ದಾರೆ.

 

 

ಚೆನ್ನೈ, ಏ.6: ಲಾಕ್ ಡೌನ್ ಮುಗಿದ ನಂತರ ಸರ್ಕಾರ ಆರ್ಥಿಕ ಚೇತರಿಕೆಗೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಸಾಮಾನ್ಯ ಜನತೆ ಪರಿಸ್ಥಿತಿ ಕಷ್ಟವಾಗಬಹುದು ಎಂದು ರಘುರಾಮ್ ರಾಜನ್ ಹೇಳಿದ್ದಾರೆ.

ಏ. 14ಕ್ಕೆ ಲಾಕ್ ಡೌನ್ ಕೊನೆಯಾಗಿ ಜೀವನ ಎಂದಿನಂತೆ ಸಾಗುತ್ತಿರುತ್ತದೆ ಎಂದು ಸಾಮಾನ್ಯ ಜನತೆ ಅಂದುಕೊಂಡರೆ ತಪ್ಪು. ದೇಶದಲ್ಲಿ ಹಲವು ನಾಗರಿಕರಿಗೆ ಮುಂದೆ ಜೀವನದ ಪರಿಸ್ಥಿತಿ ಇದೇ ರೀತಿ ಇರಲಿಕ್ಕಿಲ್ಲ ಎಂದು ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ಸೋಂಕು ವಿರುದ್ಧ ಭಾರತ ಗೆದ್ದರೆ ಆಯಿತು ಎಂದು ಹೇಳಿದಷ್ಟು ಸುಲಭವಲ್ಲ, ಇಷ್ಟು ದಿನಗಳ ಲಾಕ್ ಡೌನ್ ನಿಂದ ಉಂಟಾದ ಆರ್ಥಿಕ ಸಂಕಷ್ಟದಿಂದ ಹೊರಬರಲು ಕಷ್ಟವಿದೆ, ಸಾಕಷ್ಟು ಸಮಯವೇ ಬೇಕಾಗಬಹುದು ಎಂದು ಅವರು ಹೇಳಿದ್ದಾರೆ.

2008-09ರಲ್ಲಿ ಜಾಗತಿಕ ಮಟ್ಟದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರ ಹದಗೆಟ್ಟಿತ್ತು. ಆದರೆ ಅಂದು ಲಾಕ್ ಡೌನ್ ಆಗಿರಲಿಲ್ಲ.  ಆರ್ಥಿಕ ಚಟುವಟಿಕೆಗಳು, ವ್ಯವಹಾರಗಳು, ಜನಜೀವನ ಎಂದಿನಂತೆ ಅಂದು ಸಾಗಿತ್ತು. ಅಂದು ಸರ್ಕಾರದ ಆರ್ಥಿಕ ಪರಿಸ್ಥಿತಿ ಆರೋಗ್ಯಕರವಾಗಿತ್ತು. ಆದರೆ ಇಂದು ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ.

.

ಫ್ರೆಶ್ ನ್ಯೂಸ್

Latest Posts

Featured Videos