ಶಿವಮೊಗ್ಗ, ಆ. 13: ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಜನ ಜೀವನ ತತ್ತರಿಸುತ್ತಿದ್ದು, ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಂಸದ ರಾಘವೇಂದ್ರ, ಶಾಸಕ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಆಯನೂರು ಮಂಜುನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.