ಇಂದು ಡಿಕೆಶಿ ಭವಿಷ್ಯ?

ಇಂದು ಡಿಕೆಶಿ ಭವಿಷ್ಯ?

ಬೆಂಗಳೂರು, ಅ. 14: ಕಾಂಗ್ರೆಸ್ ನ ಟ್ರಬಲ್ ಶೂಟರ್ ಮಾಜಿ ಸಚಿವ ಡಿಕೆಶಿ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದ್ದು, ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠ ತೀರ್ಪು ನೀಡಲಿದೆ. ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ಮತ್ತೆ ಕೈಗೆತ್ತಿಕೊಂಡಿದೆ.

ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಎಷ್ಟೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು ನ್ಯಾಯಲಯ ತಿರಸ್ಕರಿಸುತ್ತಲೇ ಬಂದಿದೆ. ಸೆ. 4ರಿಂದಲೂ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಡಿಕೆಶಿ ಅವರನ್ನು ನ್ಯಾಯಾಂಗ ಕಸ್ಟಡಿಗೆ ಒಳಪಡಿಸಲಾಗಿದೆ. ಅವರಿಗೆ ಜಾಮೀನು ಸಿಗುವವರೆಗೂ ಡಿಕೆಶಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಿದೆ.

 

ಫ್ರೆಶ್ ನ್ಯೂಸ್

Latest Posts

Featured Videos