ಇಂದು ಕೆಎಂಎಫ್ ಚುನಾವಣೆ

ಇಂದು ಕೆಎಂಎಫ್ ಚುನಾವಣೆ

ಬೆಂಗಳೂರು, ಆ. 31: ಇಂದು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಧ್ಯಕ್ಷಗಾದಿಯ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಸದಿರಲು ನಿರ್ಧರಿಸಿದ್ದಾರೆ.

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಆದರೆ, ಕಾಂಗ್ರೆಸ್ನಿಂದ ಭೀಮಾ ನಾಯಕ್ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದರಿಂದ ಮೈತ್ರಿ ಪಕ್ಷಗಳ ನಾಯಕರಲ್ಲಿ ಇದೇ ವಿಷಯಕ್ಕಾಗಿ ಕಿತ್ತಾಟ ಶುರುವಾಗಿತ್ತು. ಆದರೆ,  ಇಂದು ನಡೆಯುವ ಕೆಎಂಎಫ್ ಚುನಾವಣೆಯಲ್ಲಿ ಬಿಜೆಪಿಯಿಂದ ಬಾಲಚಂದ್ರ ಜಾರಕಿಹೊಳಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧರಿಸಿರುವುದರಿಂದ ಹೆಚ್.ಡಿ. ರೇವಣ್ಣ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗುವ ಹಿನ್ನೆಲೆಯಲ್ಲಿ ಚುನಾವಣೆಗೆ ನಿಂತು ಸೋಲುವ ಭಯದಿಂದ ಹೆಚ್.ಡಿ. ರೇವಣ್ಣ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಈಗಾಗಲೇ 11 ನಿರ್ದೇಶಕರೊಂದಿಗೆ ಚುನಾವಣೆ ಎದುರಿಸಲು ಬಾಲಚಂದ್ರ ಜಾರಕಿಹೊಳಿ ಮುಂದಾಗಿದ್ದಾರೆ. ಇಂದಿನ ಚುನಾವಣೆಯಲ್ಲೂ ಕೂಡ ಬಾಲಚಂದ್ರ ಜಾರಕಿಹೊಳಿಯೇ ಗೆಲ್ಲುವ ಸಾಧ್ಯತೆಯಿದೆ. ಇದೀಗ ಚುನಾವಣೆಯಲ್ಲಿ ಸೋಲುವ ಭಯದಿಂದ ಮೊದಲೇ ಚುನಾವಣಾ ಕಣದಿಂದ ಹೆಚ್.ಡಿ. ರೇವಣ್ಣ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos