ಹಾಸನಾಂಬೆಯ ದರ್ಶನ ಇಂದು ಕೊನೆಯ ದಿನ

ಹಾಸನಾಂಬೆಯ ದರ್ಶನ ಇಂದು ಕೊನೆಯ ದಿನ

ಹಾಸನ, ಅ. 28 : ಹಾಸನಾಂಬೆಯ ಸಾರ್ವಜನಿಕ ದರ್ಶನಕ್ಕೆ ಇಂದು ಕಡೆಯ ದಿನ. ಅ. 17ರಂದು ತೆರೆದಿದ್ದ ಹಾಸನಾಂಬ ದೇವಾಲಯ ಬಾಗಿಲು ಅ.29ರಂದು ಮುಚ್ಚುತ್ತಾರೆ. ಮೂರು ದಿನಗಳಿಂದ ದೇವಿ ದರ್ಶನಕ್ಕೆ ಭಕ್ತ ಸಾಗರ ಹರಿದು ಬಂದಿದ್ದು, 13 ದಿನಗಳ ಕಾಲ ಹಾಸನಾಂಬೆ ದರ್ಶನ ನೀಡಿದ್ದಾಳೆ. ನಾಲ್ಕು ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಮಂಗಳವಾರ ಮಧ್ಯಾಹ್ನ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ.
ಅಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆದಿತ್ತು. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತಸಾಗರ ಹರಿದು ಬಂದಿತ್ತು. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು ದೇವಿಯ ದರ್ಶನವನ್ನು ಪಡೆಯಲು ಆಗಮಿಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos