ವಾರಣಾಸಿಯಲ್ಲಿ ಇಂದು ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿಯಲ್ಲಿ ಇಂದು ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ, ಏ. 26, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಎನ್ ಡಿಎ ಮೈತ್ರಿಕೂಟದ ಮುಖಂಡರ ಉಪಸ್ಥಿತಿಯಲ್ಲಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಮೋದಿ ನಾಮಪತ್ರ ಸಲ್ಲಿಸಲಿದ್ದು, ಅವರೊಂದಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೂ ಜೊತೆಯಾಗಲಿದ್ದಾರೆ. ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಎಲ್ ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್, ಎಐಎಡಿಎಂಕೆ ನಾಯಕರೂ ಉಪಸ್ಥಿತರಿರಲಿದ್ದಾರೆ. ಈ ಮೂಲಕ ಎನ್ ಡಿಎ ಮೈತ್ರಿಕೂಟದ ಶಕ್ತಿ ಪ್ರದರ್ಶನವೂ ನಡೆಯಲಿದೆ.

ವಾರಣಾಸಿ ಕ್ಷೇತ್ರದಲ್ಲಿ ಕೊನೆಯ ಹಂತದಲ್ಲಿ ಮೇ 19 ರಂದು ಚುನಾವಣೆ ನಡೆಯಲಿದ್ದು, ಮೇ 23 ಕ್ಕೆ ಫಲಿತಾಂಶ ಹೊರಬೀಳಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos